ಬುಧವಾರ, ಡಿಸೆಂಬರ್ 1, 2021
20 °C

ಸಕಲ ಸರ್ಕಾರಿ ಗೌರವಗಳೊಂದಿಗೆ ಯೋಧ ಸಿದ್ದಾರ್ಥ ವಶಿಷ್ಟ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಂಡೀಗಢ: ಶ್ರೀನಗರ ಸಮೀಪದ ಬಡಗಾಮ್‌ನಲ್ಲಿ ಭಾರತೀಯ ವಾಯುಪಡೆಯ ಎಂಐ–17 ಹೆಲಿಕಾಪ್ಟರ್‌ ಪತನವಾಗಿ ಮೃತಪಟ್ಟಿದ್ದ ಯೋಧ ಸಿದ್ಧಾರ್ಥ ವಶಿಷ್ಟ ಅವರ ಅಂತ್ಯಕ್ರಿಯೆ ಸಕಲ ಮಿಲಿಟರಿ ಗೌರವಗಳೊಂದಿಗೆ ಶುಕ್ರವಾರ ನೆರವೇರಿತು.

ಕಳೆದ ಬುಧವಾರ ಇಲ್ಲಿಂದ 18 ಕಿ.ಮೀ. ದೂರದಲ್ಲಿರುವ ಬಡಗಾಮ್‌ನಲ್ಲಿ ಬೆಳಗ್ಗೆ ಎಂಐ–17 ಹೆಲಿಕಾಪ್ಟರ್‌ ಪತನವಾಗಿತ್ತು. ಈ ಅವಘಡದಲ್ಲಿ ಸಿದ್ಧಾರ್ಥ ವಶಿಷ್ಟ ಸೇರಿದಂತೆ 6 ಜನ ಯೋಧರು ಮೃತಪಟ್ಟಿದ್ದರು.

ವಾಯುಪಡೆಯ ವಿಶೇಷ ವಿಮಾನದ ಮೂಲಕ ಸಿದ್ಧಾರ್ಥ ವಶಿಷ್ಠ ಅವರ ಪಾರ್ಥಿವ ಶರೀರವನ್ನು ಗುರುವಾರವೇ ಚಂಡೀಗಢಕ್ಕೆ ತರಲಾಗಿತ್ತು. ಇಂದು ಬೆಳಗ್ಗೆ ಪಾರ್ಥಿವ ಶರೀರವನ್ನು ಅವರ ಕುಟುಂಬಸ್ಥರಿಗೆ ನೀಡಲಾಯಿತು. 

ಹಿರಿಯ ಪೊಲೀಸ್‌ ಅಧಿಕಾರಿಗಳು ಮತ್ತು ಮಿಲಿಟರಿ ಸಿಬ್ಬಂದಿಗಳು ಸಕಲ ಮಿಲಿಟರಿ ಗೌರವ ಸಲ್ಲಿಸಿದರು. ಆ ಬಳಿಕ ಸಿದ್ಧಾರ್ಥ ಅವರ ಅಂತ್ಯಕ್ರಿಯೆಯನ್ನು ಧಾರ್ಮಿಕ ವಿಧಿವಿಧಾನಗಳ ಮೂಲಕ ನೆರವೇರಿಸಲಾಯಿತು. ಸಿದ್ದಾರ್ಥ ಅವರ ಪತ್ನಿ ಹಾಗೂ ತಂದೆ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದರು. 

ಈ ಸಂದರ್ಭದಲ್ಲಿ ಚಂಡೀಗಢದ ಬಿಜೆಪಿ ರಾಜ್ಯಾಧ್ಯಕ್ಷ ಸಂಜಯ್‌ ಟಂಡಂನ್‌, ಹರಿಯಾಣ ಸಚಿವ ನಯಿಬ್‌ ಸೈನಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.  

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು