ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾಮೂಹಿಕ ಅತ್ಯಾಚಾರ: ಸಾಕ್ಷಿ ಕೊಂದ ಯುವಕರು

Last Updated 11 ಮೇ 2020, 20:00 IST
ಅಕ್ಷರ ಗಾತ್ರ

ಲಖನೌ: ಒಂದೇ ಗ್ರಾಮದ ಇಬ್ಬರು ಯುವಕರು ಹದಿಹರೆಯದ ಹುಡುಗಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿ, ಅದಕ್ಕೆ ಸಾಕ್ಷಿಯಾಗಿದ್ದ ಸಂತ್ರಸ್ತೆಯ ಸಹೋದರನನ್ನು ಕೊಂದಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಇಟಾ ಜಿಲ್ಲೆಯಲ್ಲಿ ನಡೆದಿದೆ.

ಆರೋಪಿಗಳಿಬ್ಬರು ಪ್ರಭಾವಿ ಕುಟುಂಬದ ಯುವಕರು ಎನ್ನಲಾಗಿದೆ. ಮನೆಯಲ್ಲಿ ಒಂಟಿಯಾಗಿದ್ದ ಹುಡುಗಿಯ ಮೇಲೆ ಅತ್ಯಾಚಾರ ಮಾಡಿ, ಸಾಕ್ಷಿಯಾಗಿದ್ದ ಸಂತ್ರಸ್ತೆಯ ಸಹೋದರ ಅಪ್ರಾಪ್ತ ವಯಸ್ಸಿನ ಬಾಲಕನನ್ನು ಟವೆಲ್‌ನಿಂದ ಉಸಿರುಗಟ್ಟಿಸಿ ಸಾಯಿಸಿದ್ದರು ಎನ್ನಲಾಗಿದೆ. ದೇಹವನ್ನು ಬಲವಂತವಾಗಿ ಮಣ್ಣು ಮಾಡಬೇಕು ಎಂದು ಪೋಷಕರಿಗೆ ತಾಕೀತು ಮಾಡಿದ್ದಲ್ಲದೇ, ಪೊಲೀಸರನ್ನು ಸಂಪರ್ಕಿಸದಂತೆ ಬೆದರಿಕೆಯೊಡ್ಡಿದ್ದರು ಎಂದು ತಿಳಿದುಬಂದಿದೆ.

ಘಟನೆ ನಡೆದು ಮೂರು ದಿನಗಳ ನಂತರ ಸಂತ್ರಸ್ತೆಯ ಪೋಷಕರು ದೂರು ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT