ಗುರುವಾರ , ಜೂಲೈ 9, 2020
29 °C

ಅಪ್ರಾಪ್ತ ಸಹೋದರಿಯರ ಮೇಲೆ ಸಾಮೂಹಿಕ ಅತ್ಯಾಚಾರ: ಇಬ್ಬರ ವಿರುದ್ಧ ಪ್ರಕರಣ ದಾಖಲು

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಜೈಪುರ: ರಾಜಸ್ಥಾನದ ಬರ್ಮರ್‌ನ ಶಾಸ್ತ್ರಿ ನಗರದಲ್ಲಿ ಕಳೆದ ಒಂದು ವರ್ಷದಿಂದ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದಡಿಯಲ್ಲಿ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

ಈ ಬಗ್ಗೆ ಮಾಧ್ಯಮಗೋಷ್ಠಿ ನಡೆಸಿರುವ ಪೊಲೀಸ್‌ ಅಧಿಕಾರಿ ಪುಷ್ಪೇಂದ್ರ, 'ಬರ್ಮರ್‌ನ ಶಾಸ್ತ್ರಿ ನಗರದಲ್ಲಿ ಕಳೆದ ಒಂದು ವರ್ಷದಿಂದ ಇಬ್ಬರು ಅಪ್ರಾಪ್ತ ಸಹೋದರಿಯರ ಮೇಲೆ ಹಲವು ಬಾರಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. ಈ ಸಂಬಂಧ ಇಬ್ಬರು ವ್ಯಕ್ತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ' ಎಂದು ತಿಳಿಸಿದ್ದಾರೆ. 

ಈ ಅಮಾನವೀಯ ಕೃತ್ಯ ಎಸಗಲು ಆರೋಪಿಗಳಿಗೆ ಸಹಾಯ ಮಾಡಿದ್ದಕ್ಕಾಗಿ ಇಬ್ಬರು ಮಹಿಳೆಯರ ಮೇಲೆಯೂ ಕೇಸು ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು