ಮೂವರ ಮೇಲೆ ಅತ್ಯಾಚಾರ

ಮಂಗಳವಾರ, ಜೂನ್ 18, 2019
23 °C

ಮೂವರ ಮೇಲೆ ಅತ್ಯಾಚಾರ

Published:
Updated:

ಜೈಪುರ: ಅಲ್ವಾರ್ ಸೇರಿದಂತೆ ರಾಜಸ್ಥಾನದ ಮೂರು ಕಡೆಗಳಲ್ಲಿ ಮೂವರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಲಾಗಿದೆ. 

ಅಲ್ವಾರ್‌ನ ಹಸ್ರೌರ ಗ್ರಾಮದಲ್ಲಿ ಮೇ 14ರಂದು 15 ವರ್ಷದ ಬಾಲಕಿ ಮೇಲೆ ಮೂವರು ಅಪ್ರಾಪ್ತ ಬಾಲಕರು ಅತ್ಯಾಚಾರ ಎಸಗಿದ್ದರು ಎಂದು ಪೊಲೀಸರು ಹೇಳಿದ್ದಾರೆ. 

‘ಒಬ್ಬ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇನ್ನಿಬ್ಬರನ್ನು ಮಾರನೆಯ ದಿನ ಬಾಲಕಿಯ ಕುಟುಂಬದವರು ಹಿಡಿದು ಥಳಿಸಿದ್ದಾರೆ. ಕೆಲವು ತಾಸುಗಳ ಬಳಿಕ ಒಬ್ಬ ಆರೋಪಿ ರಸ್ತೆಬದಿಯಲ್ಲಿ ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ’ ಎಂದು ಪೊಲೀಸ್‌ ವರಿಷ್ಠಾಧಿಕಾರಿ ಪ್ಯಾರಿಸ್ ಅನಿಲ್ ದೇಶ್‌ಮುಖ್ ಹೇಳಿದ್ದಾರೆ. 

‘ಬಾಲಕಿಯ ಕುಟುಂಬ ಮೂವರು ಆರೋಪಿಗಳ ವಿರುದ್ಧ ದೂರು ದಾಖಲಿಸಿದ್ದಾರೆ. ಮೃತ ಆರೋಪಿಯ ಕುಟುಂಬದವರು ಬಾಲಕಿಯ ಸೋದರ ಹಾಗೂ ಇತರರ ವಿರುದ್ಧ ದೂರು ದಾಖಲಿಸಿದ್ದಾರೆ. ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದ್ದು, ಬಾಲಾಪರಾಧಿ ಪರಿವರ್ತನಾ ಗೃಹಕ್ಕೆ ಕಳುಹಿಸಲಾಗುವುದು’ ಎಂದು ಅವರು ತಿಳಿಸಿದ್ದಾರೆ. 

ಸಂಬಂಧಿಕನಿಂದಲೇ ಕೃತ್ಯ: ಭನಿಪು ಪ್ರದೇಶದ ಚುರುವಿನಲ್ಲಿ ಆರು ವರ್ಷದ ಬಾಲಕಿ ಮೇಲೆ 14 ವರ್ಷದ ಬಾಲಕ ಅತ್ಯಾಚಾರ ನಡೆಸಿದ್ದಾನೆ. ಬಾಲಕಿಯ ಸಂಬಂಧಿಕನಾಗಿರುವ ಈತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಮತ್ತೊಂದು ಪ್ರಕರಣದಲ್ಲಿ ಧೋಲಪುರದ ಖುರ್ದ್ ಗ್ರಾಮದಲ್ಲಿ ಎಂಟರ ಬಾಲಕಿ ಮೇಲೆ 18 ವರ್ಷದ ಯುವಕ ಅತ್ಯಾಚಾರ ಎಸಗಿದ್ದಾನೆ. ಪರ್ವೇಶ್ ಎಂದು ಗುರುತಿಸಲಾಗಿರುವ ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !