ಶನಿವಾರ, ಜೂಲೈ 11, 2020
23 °C

ಆಂಧ್ರದಲ್ಲಿ ಮತ್ತೊಂದು ಅನಿಲ ದುರಂತ: ವಿಶಾಖಪಟ್ಟಣ ಕಾರ್ಖಾನೆ ವಿಷಾನಿಲಕ್ಕೆ 2 ಸಾವು

ಎಎನ್‌ಐ Updated:

ಅಕ್ಷರ ಗಾತ್ರ : | |

ವಿಶಾಖಪಟ್ಟಣ: ಆಂಧ್ರಪ್ರದೇಶದಲ್ಲಿ ಮತ್ತೊಂದು ಅನಿಲ ದುರಂತ ಸಂಭವಿಸಿದೆ. ಈ ದುರಂತದಲ್ಲಿ ಇಬ್ಬರು ಸಾವಿಗೀಡಾಗಿದ್ದರೆ, ನಾಲ್ವರು ಆಸ್ಪತ್ರೆಗೆ ದಾಖಲಾಗಿದ್ದಾರೆ.

ವಿಶಾಖಪಟ್ಟಣದಲ್ಲಿರುವ ‘ಸೈನರ್ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್’ ಕಾರ್ಖಾನೆಯಿಂದ ‘ಬೆಂಜಿಮಿಡಾಜೋಲ್’ ಎಂಬ ವಿಷಾನಿಲ ಸೋರಿಕೆಯಾಗಿದ್ದು, ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಾವಿಗೀಡಾಗಿದ್ದಾರೆ. ತೀವ್ರ ಅಸ್ವಸ್ಥರಾಗಿದ್ದ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಕುರಿತು ಮಾತನಾಡಿರುವ ಪರ್ವಾಡ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಪವನ್‌ ಕುಮಾರ್‌, ‘ವಿಷಾನಿಲ ಸೋರಿಕೆಯಿಂದಾಗಿ ಇಬ್ಬರು ಮೃತಪಟ್ಟಿದ್ದಾರೆ. ನಾಲ್ವರನ್ನು ಆಸ್ಪತ್ರೆಗೆ ಸೇರಿಸಿದ್ದೇವೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ. ಮೃತರಾದ ಇಬ್ಬರೂ ಕಾರ್ಖಾನೆ ಕೆಲಸಗಾರರು. ಅನಿಲ ಸೋರಿಕೆಯಾದ ಸ್ಥಳದಲ್ಲೇ ಅವರಿದ್ದರು. ಅನಿಲವು ಹೆಚ್ಚಿನ ಪ್ರಮಾಣದಲ್ಲಿ ಹರಡುವುದನ್ನು ತಡೆಯಲಾಗಿದೆ,’ ಎಂದು ಹೇಳಿದ್ದಾರೆ.

ವರದಿ ಪಡೆದ ಸಿಎಂ

‘ವಿಶಾಖಪಟ್ಟಣ ಪ್ರಕರಣದ ಕುರಿತು ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ವರದಿ ಪಡೆದಿದ್ದಾರೆ. ಸೋಮವಾರ ರಾತ್ರಿ 11.30ರಲ್ಲಿ ಈ ದುರಂತ ಸಂಭವಿಸಿದ್ದು, ಕೂಡಲೇ ಕಾರ್ಖಾನೆಯನ್ನು ಬಂದ್‌ ಮಾಡಿ, ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ,’ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಇವುಗಳನ್ನೂ ಓದಿ...

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು