ಶುಕ್ರವಾರ, ಡಿಸೆಂಬರ್ 6, 2019
20 °C

ಪೂರ್ವ ದೆಹಲಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗಂಭೀರ್‌ ಸ್ಪರ್ಧೆ

ಏಜನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಕ್ರೆಕೆಟಿಗ ಗೌತಮ್‌ ಗಂಭೀರ್‌ ಅವರನ್ನು ಪೂರ್ವ ದೆಹಲಿ ಲೋಕಸಭೆ ಕ್ಷೇತ್ರದ ಅಭ್ಯರ್ಥಿಯಾಗಿ ಬಿಜೆಪಿಯು ಸೋಮವಾರ ರಾತ್ರಿ ಘೋಷಿಸಿದೆ. 

ದೆಹಲಿಯ ಏಳು ಲೋಕಸಭೆ ಕ್ಷೇತ್ರಗಳ ಪೈಕಿ ಎರಡು ಕ್ಷೇತ್ರಗಳಿಗೆ ಬಿಜೆಪಿ ಸೋಮವಾರ ತನ್ನ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿತು. ಪೂರ್ವ ದೆಹಲಿಯಿಂದ ಮಾಜಿ ಕ್ರಿಕೆಟಿಕ ಗೌತಮ್‌ ಗಂಭೀರ್‌ ಆಭ್ಯರ್ಥಿಯಾದರೆ, ಮೀನಾಕ್ಷಿ ಲೇಖಿ ನವದೆಹಲಿ ಕ್ಷೇತ್ರದಿಂದ ಕಣಕ್ಕಿಳಿಯಲಿದ್ದಾರೆ. 2014ರಲ್ಲೂ ಅವರು ಇದೇ ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು.  

ಇದನ್ನೂ ಓದಿ:  ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್  

ಕ್ರಿಕೆಟ್‌ ರಂಗದಲ್ಲಿ ಹೆಸರು ಮಾಡಿದ್ದ ಗೌತಮ್‌ ಗಂಭೀರ್‌ ಅವರು ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದರು. ಅವರು ಈ ಬಾರಿ ಚುನಾವಣೆಗೆ ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾತುಗಳು ಕೇಳಿ ಬಂದಿದ್ದವು. ಅಂತಿಮವಾಗಿ ಅವರು ಪೂರ್ವ ದೆಹಲಿಯ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು