ಮಂಗಳವಾರ, ಆಗಸ್ಟ್ 11, 2020
27 °C

ಬಿಜೆಪಿ ಸೇರಿದ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್  

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್ ಶುಕ್ರವಾರ ಬಿಜೆಪಿ ಸೇರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿ ನನ್ನ ಮೇಲೆ ಪ್ರಭಾವ ಬೀರಿದೆ. ನಾನು ಕ್ರಿಕೆಟ್ ಕ್ಷೇತ್ರದಲ್ಲಿ ಕೊಡುಗೆ ನೀಡಿದ್ದೇನೆ. ಈಗ ನಾನು ದೇಶಕ್ಕಾಗಿ ಮತ್ತಷ್ಟು ಕಾರ್ಯಗಳನ್ನು ಮಾಡಲು ಬಯಸುತ್ತೇನೆ ಎಂದು ಗಂಭೀರ್ ಹೇಳಿದ್ದಾರೆ.

ಗಂಭೀರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ವಿತ್ತ ಸಚಿವ ಅರುಣ್ ಜೇಟ್ಲಿ,  ಗಂಭೀರ್ ಅವರ ವೃತ್ತಿ ಜೀವನ ಉತ್ತಮವಾಗಿತ್ತು. ಅವರು ತಮ್ಮ ಸಾಮರ್ಥ್ಯವನ್ನು ಪಕ್ಷಕ್ಕೆ ಬಳಸಿಕೊಳ್ಳುತ್ತಾರೆ ಎಂಬ ನಿರೀಕ್ಷೆ ಇದೆ. ಅವರ ಜಾಣ್ಮೆ ಪಕ್ಷಕ್ಕೆ ನೆರವಾಗಲಿದೆ ಎಂದಿದ್ದಾರೆ.

ಅಂದಹಾಗೆ ದೆಹಲಿ ಲೋಕಸಭಾ ಕ್ಷೇತ್ರದಲ್ಲಿ  ಗಂಭೀರ್ ಸ್ಪರ್ಧಿಸುತ್ತಾರಾ? ಎಂಬ ಪ್ರಶ್ನೆಗೆ ಉತ್ತರಿಸಿದ ಜೇಟ್ಲಿ, ಈ ಬಗ್ಗೆ ಪಕ್ಷದ ಚುನಾವಣಾ ಸಮಿತಿ ನಿರ್ಧರಿಸುತ್ತದೆ ಎಂದಿದ್ದಾರೆ.

ಸಾಮಾಜಿಕ ಮಾಧ್ಯಮಗಳಲ್ಲಿ 90 ಲಕ್ಷದಷ್ಟು ಫಾಲೋವರ್‌ಗಳನ್ನು ಹೊಂದಿರುವ ಗಂಭೀರ್, ಸಾಮಾಜಿಕ ಹಾಗೂ ರಕ್ಷಣಾ ವಿಷಯಗಳ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸುತ್ತಾ ಸಕ್ರಿಯರಾಗಿದ್ದುದರಿಂದ ಅವರು ರಾಜಕೀಯ ಪ್ರವೇಶಿಸುತ್ತಾರೆ ಎಂಬ ಸುದ್ದಿ ಈ ಹಿಂದೆಯೇ ಹಬ್ಬಿತ್ತು.  ಆಗ ಈ ಸುದ್ದಿಯನ್ನು ಅಲ್ಲಗೆಳೆದಿದ್ದ ಗಂಭೀರ್  ನಾನು ಕುಟುಂಬದ ಬಗ್ಗೆ ಯೋಚಿಸಬೇಕಿದೆ. ನಾನು ಅವರೊಂದಿಗೆ ಕಳೆದ ಕ್ಷಣಗಳು ಕಡಿಮೆಯೇ, ಹಾಗಾಗಿ ಅವರಿಗೆ ಸಮಯ ಕೊಡಬೇಕಿದೆ ಎಂದಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು