ಸೋಮವಾರ, ಸೆಪ್ಟೆಂಬರ್ 27, 2021
22 °C

ಗಿರಿರಾಜ್‌ ಸಿಂಗ್‌ಗೆ ನೋಟಿಸ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಬಿಹಾರದ ಬೇಗುಸರಾಯ್‌ನಲ್ಲಿ ಚುನಾವಣಾ ಪ್ರಚಾರದ ವೇಳೆ ಕೋಮು ಭಾವನೆ ಕೆರಳಿಸುವ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಅಭ್ಯರ್ಥಿ ಗಿರಿರಾಜ್ ಸಿಂಗ್‌ಗೆ ಚುನಾವಣಾ ಆಯೋಗ ಸೋಮವಾರ ನೋಟಿಸ್ ನೀಡಿದೆ. ಉತ್ತರಿಸಲು 24 ಗಂಟೆ ಗಡುವು ನೀಡಿದೆ. 

ನೀತಿ ಸಂಹಿತೆ ಉಲ್ಲಂಘನೆ ಆಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದಿರುವ ಆಯೋಗ, ಚುನಾವಣೆಯಲ್ಲಿ ಜಾತಿ ಹಾಗೂ ಧರ್ಮವನ್ನು ಬಳಸಿಕೊಳ್ಳುವುದು ಸುಪ್ರೀಂ ಕೋರ್ಟ್‌ ಆದೇಶದ ಸ್ಪಷ್ಟ ಉಲ್ಲಂಘನೆಯಾಗುತ್ತದೆ ಎಂದೂ ಅಭಿಪ್ರಾಯಪಟ್ಟಿದೆ. 

ಏಪ್ರಿಲ್ 24ರಂದು ಬೇಗುಸರಾಯ್‌ನಲ್ಲಿ ಮಾತನಾಡಿದ್ದ ಗಿರಿರಾಜ್ ಸಿಂಗ್, ‘ಯಾರು ವಂದೇ ಮಾತರಂ ಹೇಳುವುದಿಲ್ಲವೋ ಅಥವಾ ತಾಯ್ನಾಡಿಗೆ ಗೌರವ ನೀಡುವುದಿಲ್ಲವೋ ಅವರನ್ನು ದೇಶ ಕ್ಷಮಿಸುವುದಿಲ್ಲ. ನನ್ನ ಪೂರ್ವಜರು ಮೃತಪಟ್ಟಾಗ ಅವರ ಸಮಾಧಿಗೆ ಸ್ಥಳದ ಅಭಾವ ಇರಲಿಲ್ಲ. ಆದರೆ ನಿಮಗೆ ಮೂರಡಿ ಜಾಗವಾದರೂ ಬೇಡವೇ‘ ಎಂದು ಮತದಾರರನ್ನು ಉದ್ದೇಶಿಸಿ ಹೇಳಿದ್ದರು. ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರೂ ಈ ವೇಳೆ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು