ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

17 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ಯುವಕ

Last Updated 29 ಫೆಬ್ರುವರಿ 2020, 12:31 IST
ಅಕ್ಷರ ಗಾತ್ರ

ಹೈದರಾಬಾದ್‌: 21 ವರ್ಷದ ಯುವಕನೊಬ್ಬ 17 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬೆಂಕಿ ಹಚ್ಚಿದ ಹೃದಯ ವಿದ್ರಾವಕ ಘಟನೆ ತೆಲಂಗಾಣದ ಸತ್ಯಪೇಟ ಜಿಲ್ಲೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಸಂತ್ರಸ್ತೆಯ ದೇಹವು ಶೇ.50ರಷ್ಟು ಸುಟ್ಟಿದ್ದು, ವಾರಂಗಲ್‌ನ ಸರ್ಕರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಶುಕ್ರವಾರ ರಾತ್ರಿ ಯಾರೂ ಇಲ್ಲದ ಸಂದರ್ಭ ಯುವತಿಯ ಮನೆಗೆ ತೆರಳಿದ್ದ ಯುವಕ ಅವಳನ್ನು ಬಲವಂತವಾಗಿ ಎಳೆದುಕೊಂಡು ಹೋಗಿ ಊರ ಹೊರಗೆ ಅತ್ಯಾಚಾರ ಎಸಗಿದ್ದಾನೆ.

ತಾನು ಮಾಡಿದ ಕೃತ್ಯ ಯಾರಿಗೂ ತಿಳಿಯಬಾರದೆಂಬ ಕಾರಣಕ್ಕೆ ಯುವತಿ ದೇಹಕ್ಕೆ ಬೆಂಕಿ ಹಚ್ಚಿ ಕೊಲೆಗೆ ಯತ್ನಿಸಿದ್ದಾನೆ.

ಯುವತಿಯ ಕೂಗಾಟ ಕೇಳಿ ಸಹಾಯಕ್ಕೆ ದಾವಿಸಿದ ನೆರೆಯವರು ಯುವತಿಯನ್ನು ಆಸ್ಪತ್ರೆಗೆ ಸಾಗಿಸಿದ್ದಾರೆ.

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ತೆಲಂಗಾಣ ಪೊಲೀಸರು ಪೋಕ್ಸೊ ಕಾಯ್ದೆಯಡಿ ಅತ್ಯಾಚಾರ ಮತ್ತು ಕೊಲೆ ಯತ್ನದ ಪ್ರಕರಣಗಳನ್ನು ದಾಖಲಿಸಿದ್ದಾರೆ.

ಕೃತ್ಯ ಎಸಗಿ ಪರಾರಿಯಾಗಿರುವ ಯುವಕನಿಗಾಗಿ ತೀವ್ರ ಶೋಧ ನಡೆಯುತ್ತಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT