ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗೋವಾ ಮುಖ್ಯಮಂತ್ರಿ ಹುದ್ದೆಗೆ ಮಿತ್ರಪಕ್ಷ ಬೇಡಿಕೆ

Last Updated 17 ನವೆಂಬರ್ 2018, 16:49 IST
ಅಕ್ಷರ ಗಾತ್ರ

ಪಣಜಿ: ಮಹಾರಾಷ್ಟ್ರವಾದಿ ಗೋಮಾಂತಕ ಪಾರ್ಟಿ (ಎಂಜಿಪಿ) ಹಿರಿಯ ನಾಯಕ ಮತ್ತು ಸಚಿವ ಸುದಿನ್‌ ಧವಳಿಕರ್‌ ಅವರಿಗೆ ಗೋವಾದ ಮಖ್ಯಮಂತ್ರಿ ಸ್ಥಾನ ಬಿಟ್ಟು ಕೊಡುವಂತೆ ಬಿಜೆಪಿಯ ಮಿತ್ರಪಕ್ಷವಾಗಿರುವ ಎಂಜಿಪಿ ಒತ್ತಾಯಿಸಿದೆ.

‘ಅನಾರೋಗ್ಯದಿಂದ ಬಳಲುತ್ತಿರುವ ಮನೋಹರ ಪರ‍್ರೀಕರ್‌ ಅವರಿಗೆ ಮುಖ್ಯಮಂತ್ರಿ ಹುದ್ದೆ ನಿರ್ವಹಿಸಲು ಆಗುತ್ತಿಲ್ಲ. ಆದ್ದರಿಂದ ಸಚಿವ ಧವಳಿಕರ್‌ ಅವರಿಗೆ ಈ ಹುದ್ದೆ ನೀಡಬೇಕು’ ಎಂದು ಎಂಜಿಪಿ ಆಗ್ರಹಿಸಿದೆ.

ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ ಮುಂಬರುವ ಲೋಕಸಬೆ ಹಾಗೂ ವಿಧಾನಸಭೆಯ ಉಪ ಚುನಾವಣೆಯಲ್ಲಿ ಬಿಜೆಪಿ ವಿರುದ್ಧವೇ ಸ್ಪರ್ಧಿಸುವುದಾಗಿ ಎಂಜಿಪಿಯು ಬಿಜೆಪಿಗೆ ಬೆದರಿಕೆ ಒಡ್ಡಿದೆ.

ಮಾಂಡ್ರೆಂವಿಧಾನಸಭೆ ಕ್ಷೇತ್ರದ ಕಾಂಗ್ರೆಸ್‌ ಶಾಸಕದಯಾನಂದ ಸೋಪ್ಟೆ ಮತ್ತು ಶಿರೋಡ ಕ್ಷೇತ್ರದ ಕಾಂಗ್ರೆಸ್‌ ಶಾಸಕ ಸುಭಾಷ್‌ ಶಿರೋಡಕರ್‌ ಕಳೆದ ತಿಂಗಳು ರಾಜೀನಾಮೆ ನೀಡಿ ಬಿಜೆಪಿ ಸೇರಿದ್ದರು. ಈ ಎರಡೂ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಬೇಕಿದೆ.

‘ಗೋವಾ ರಾಜ್ಯದ ನಾಯಕತ್ವ ಕುರಿತು ಶನಿವಾರ ಎಂಜಿಪಿ ಕೇಂದ್ರೀಯ ಸಮಿತಿ ವಿವರವಾಗಿ ಚರ್ಚೆ ನಡೆಸಿತು. ಎಂಟು ತಿಂಗಳಿನಿಂದ ರಾಜ್ಯದಲ್ಲಿ ಆಡಳಿತ ಕುಸಿದಿದೆ. ಆಡಳಿತವನ್ನು ಸುವ್ಯವಸ್ಥಿತವಾಗಿ ನಡೆಸಲು ನಮಗೆ ಮುಖ್ಯಮಂತ್ರಿ ಹುದ್ದೆ ನೀಡಬೇಕು ಎಂದು ಬೇಡಿಕೆ ಇಟ್ಟಿದ್ದೇವೆ’ ಎಂದು ಪಕ್ಷದ ಅಧ್ಯಕ್ಷ ದೀಪಕ್‌ ಧವಳಿಕರ್‌ ಹೇಳಿದ್ದಾರೆ. ‘ನಮ್ಮ ಎಚ್ಚರಿಕೆಯನ್ನು ಬಿಜೆಪಿ ಗಂಭೀರವಾಗಿ ತೆಗೆದುಕೊಳ್ಳಬೇಕು. ಶಿರೋಡ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನೇ ಸ್ಪರ್ಧಿಸಲಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT