ಭಾನುವಾರ, ಫೆಬ್ರವರಿ 16, 2020
28 °C

ಅಪರಾಧ ಪ್ರಕರಣಗಳಿರುವ ಅಭ್ಯರ್ಥಿ ಆಯ್ಕೆ ಮಾಡಿದ್ದಕ್ಕೆ ಕಾರಣ ನೀಡಿ: ಸುಪ್ರೀಂಕೋರ್ಟ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Supreme Court

ನವದೆಹಲಿ: ಅಪರಾಧ ಪ್ರಕರಣಗಳಿರುವ ಅಭ್ಯರ್ಥಿಗಳನ್ನು ಯಾಕೆ ಆಯ್ಕೆ ಮಾಡಿದ್ದೀರಿ ಎಂಬುದಕ್ಕೆ ಕಾರಣ ನೀಡಿ ಎಂದು ಸುಪ್ರೀಂಕೋರ್ಟ್ ರಾಜಕೀಯ ಪಕ್ಷಗಳಿಗೆ ಹೇಳಿದೆ. ಅಂದರೆ ತಮ್ಮ ಅಭ್ಯರ್ಥಿಯಾಗಿ ಆಯ್ಕೆ ಮಾಡಿರುವ ವ್ಯಕ್ತಿ ಚುನಾವಣೆಯಲ್ಲಿ ಗೆಲುವು ಸಾಧಿಸಲು ಇರುವ ಅಂಶದ ಹೊರತಾಗಿ ಸಮಾಜದಲ್ಲಿ ಅವರು ಏನು ಸಾಧಿಸಿದ್ದಾರೆ ಎಂಬುದರ ಬಗ್ಗೆ ರಾಜಕೀಯ ಪಕ್ಷಗಳು ವಿವರಣೆ ನೀಡಬೇಕಾಗಿದೆ.

ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಗಳ ಅಪರಾಧ  ದಾಖಲೆಗಳನ್ನು 48 ಗಂಟೆಯೊಳಗೆ ಪಕ್ಷದ ವೆಬ್‌ಸೈಟ್‌ಗಳಲ್ಲಿ ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಕಟಿಸಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.

ಬಿಜೆಪಿ ನಾಯಕ ಮತ್ತು ನ್ಯಾಯಮೂರ್ತಿ ಅಶ್ವಿನ್ ಕೆ ಉಪಾಧ್ಯಾಯ್ ಸಲ್ಲಿಸಿದ  ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಎಫ್.ನಾರಿಮನ್ ಅವರು ಸಂವಿಧಾನದ 142ನೇ ವಿಧಿಯಡಿಯಲ್ಲಿ ಈ ಆದೇಶ ನೀಡಿದ್ದಾರೆ. 

ರಾಜಕೀಯದಲ್ಲಿ ಅಪರಾಧಿಗಳ ಸಂಖ್ಯೆ ಹೆಚ್ಚುತ್ತಿರುವ ಬಗ್ಗೆ ಉಲ್ಲೇಖಿಸಿದ ಸುಪ್ರೀಂಕೋರ್ಟ್, ಅಭ್ಯರ್ಥಿ ಯಾವ ಚುನಾವಣೆಯಲ್ಲಿ  ಸ್ಪರ್ಧಿಸುತ್ತಿದ್ದಾರೆ. ಪ್ರಕರಣಗಳ ವಿವರ ಮತ್ತು ವಿಚಾರಣೆ  ಎಲ್ಲಿಯವರೆಗೆ ನಡೆದಿದೆ ಎಂಬುದನ್ನೂ ರಾಜಕೀಯ ಪಕ್ಷಗಳು ಹೇಳಬೇಕು ಎಂದಿದೆ. 

ಅಪರಾಧ ಪ್ರಕರಣಗಳಿರುವ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದರ ಬಗ್ಗೆ ರಾಜಕೀಯ ಪಕ್ಷಗಳು ಚುನಾವಣಾ ಆಯೋಗಕ್ಕೆ 74 ಗಂಟೆಗಳೊಳಗೆ ವರದಿ ಸಲ್ಲಿಸಬೇಕು. ಒಂದು ವೇಳೆ ರಾಜಕೀಯ ಪಕ್ಷಗಳು ಈ ನಿರ್ದೇಶನವನ್ನು ಪಾಲಿಸದೇ ಇದ್ದರೆ ಈ ಬಗ್ಗೆ ನಿಂದನಾ ಅರ್ಜಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ಹೇಳಿದೆ.
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು