ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

'ಗೋವಾ ಮುಖ್ಯಮಂತ್ರಿ ಮನೋಹರ್‌ ಪರ‍್ರೀಕರ್‌ ಸ್ಥಿತಿ ತೀರಾ ಗಂಭೀರ

Last Updated 17 ಮಾರ್ಚ್ 2019, 14:13 IST
ಅಕ್ಷರ ಗಾತ್ರ

ಪಣಜಿ:'ಗೋವಾ ಮುಖ್ಯಮಂತ್ರಿ ಮನೋಹರ್‌ ಪರ‍್ರೀಕರ್‌ ಸ್ಥಿತಿ ತೀರಾ ಗಂಭೀರವಾಗಿದೆ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಭಾನುವಾರ ಟ್ವೀಟ್‌ ಮಾಡಿದೆ.

ಕ್ಯಾನ್ಸರ್‌ನಿಂದ ಬಳಲುತ್ತಿರುವ ಪರ‍್ರೀಕರ್‌ಗೋವಾ ಮೆಡಿಕಲ್‌ ಕಾಜೇಜು ಮತ್ತು ಆಸ್ಪತ್ರೆ(ಜಿಎಂಸಿಎಚ್‌)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೋಹರ್‌ ಪರ‍್ರೀಕರ್‌ ಸ್ಥಿತಿ ತೀರಾ ಗಂಭೀರವಾಗಿದ್ದು ವೈದ್ಯರು ಅವರಿಗೆ ಚಿಕಿತ್ಸೆಯನ್ನು ಮುಂದುವರೆಸಿದ್ದಾರೆ ಎಂದು ಗೋವಾ ಮುಖ್ಯಮಂತ್ರಿ ಕಚೇರಿ ಟ್ವೀಟ್‌ ಮಾಡಿದೆ.

63 ವರ್ಷದಮನೋಹರ್‌ ಪರ್ರೀಕರ್‌ ಮೇದೋಜೀರಕ ಗ್ರಂಥಿ(ಪ್ಯಾಂಕ್ರಿಯಾಸ್) ಕ್ಯಾನ್ಸರ್‌ನಿಂದ ಬಳಲುತ್ತಿದ್ದಾರೆ. ಅವರು ಕಳೆದ ಒಂದು ವರ್ಷದಿಂದ ಪ್ಯಾಂಕ್ರಿಯಾಸ್‌ನಲ್ಲಿ ಉಂಟಾದ ತೊಂದರೆಗೆ, ಮುಂಬೈ, ಗೋವಾ, ದೆಹಲಿ ಏಮ್ಸ್‌ ಹಾಗೂ ಅಮೆರಿಕದಲ್ಲಿ ಚಿಕಿತ್ಸೆ ಪಡೆದಿದ್ದಾರೆ.

ಇದೀಗಗೋವಾ ಮೆಡಿಕಲ್‌ ಕಾಜೇಜು ಮತ್ತು ಆಸ್ಪತ್ರೆ(ಜಿಎಂಸಿಎ)ಯಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT