ಬುಧವಾರ, ಮೇ 12, 2021
18 °C

ಮಹಾದಾಯಿ ವಿಚಾರದಲ್ಲಿ ರಾಜಿ ಇಲ್ಲ: ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ: ಮಹಾದಾಯಿ ವಿಚಾರದಲ್ಲಿ ಯಾವುದೇ ರಾಜಿ ಇಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಬುಧವಾರ ಸ್ಪಷ್ಟಪಡಿಸಿದ್ದಾರೆ. 

‘ಮಹದಾಯಿ ಬಗ್ಗೆ ಸರ್ಕಾರಕ್ಕೆ ಬದ್ಧತೆಯಿದೆ. ಆದರೆ ಗೋವಾ ಜನರು ಮನೆಯ ತ್ಯಾಜ್ಯಗಳನ್ನು ತಂದು ನದಿಗಳಿಗೆ ಸುರಿದು, ಅವುಗಳ ನಾಶಕ್ಕೆ ಕಾರಣರಾಗುತ್ತಿದ್ದಾರೆ’ ಎಂದು ಅವರು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ‘ಮಹಾದಾಯಿ ರೀತಿಯಲ್ಲೇ ರಾಜ್ಯದ ಇತರ ನದಿಗಳ ಸಂರಕ್ಷಣೆಯೂ ನಮ್ಮ ಹೊಣೆ’ ಎಂದರು. 

ಕರ್ನಾಟಕ ಹಾಗೂ ಗೋವಾ ಮುಖ್ಯಮಂತ್ರಿಗಳು ನ್ಯಾಯಾಲಯದ ಹೊರಗೆ ಮಹಾದಾಯಿ ವಿವಾದವನ್ನು ಮಾತುಕತೆ ಮೂಲಕ ಬಗೆಹರಿಸಿಕೊಳ್ಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಕೆಲ ವಾರಗಳ ಹಿಂದ ಸಲಹೆ ನೀಡಿದ್ದರು. ಆದರೆ ಯಡಿಯೂರಪ್ಪ ಅವರ ಭೇಟಿಗೆ ಸಾವಂತ್ ನಿರಾಕರಿಸಿದ್ದರು. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು