ಶನಿವಾರ, ಜೂಲೈ 4, 2020
28 °C

ಕಳಸಾ–ಬಂಡೂರಿ ಹೊಸ ಡಿಪಿಆರ್‌ಗೆ ಗೋವಾ ಆಕ್ಷೇಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಣಜಿ: ಕಳಸಾ– ಬಂಡೂರಿ ಯೋಜನೆಗೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರವು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿರುವ ಹೊಸ ವಿಸ್ತೃತ ಯೋಜನಾ ವರದಿಯನ್ನು (ಡಿಪಿಆರ್‌) ಗೋವಾ ಸರ್ಕಾರ ವಿರೋಧಿಸಿದೆ.

ಈ ಕುರಿತು ಮಹದಾಯಿ ಜಲವಿವಾದ ನ್ಯಾಯಮಂಡಳಿಗೆ ಗೋವಾ ಸರ್ಕಾರ ಆಕ್ಷೇಪ ಸಲ್ಲಿಸಿದೆ.    

‘ಯೋಜನೆಗೆ ಸಂಬಂಧಿಸಿದಂತೆ ಆಗುತ್ತಿರುವ ಬೆಳವಣಿಗೆಗಳ ಬಗ್ಗೆ ಗೋವಾ ಸರ್ಕಾರ ಕಳವಳ ಹೊಂದಿದೆ’ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್‌ ಸಾವಂತ್‌ ಮಂಗಳವಾರ ಹೇಳಿದರು. ‘ಅವರು (ಕರ್ನಾಟಕ) ಹೊಸ ಡಿಪಿಆರ್‌ ಸಲ್ಲಿಸಿದ್ದಾರೆ ಎನ್ನುವ ಮಾಹಿತಿ ನಮಗಿದೆ. ಈ ಬಗ್ಗೆ ಕಳವಳವಿದೆ, ಆದರೆ ನಾವು ಇದರ ಕುರಿತು ನಿಗಾ ವಹಿಸಿದ್ದೇವೆ ಹಾಗೂ ಕೇಂದ್ರ ಸರ್ಕಾರದ ಸಂಪರ್ಕದಲ್ಲಿದ್ದೇವೆ’ ಎಂದರು. 

‘ಕೋವಿಡ್‌–19 ಪಿಡುಗಿನ ಪರಿಸ್ಥಿತಿ ನಡುವೆಯೂ ಮಹದಾಯಿ ವಿಚಾರಕ್ಕೆ ಸಂಬಂಧಿಸಿದಂತೆ ನಮ್ಮ ಸರ್ಕಾರ ಗಮನವಿರಿಸಿದೆ. ಈ ವಿವಾದದ ಕುರಿತು ನಾವು ಗಂಭೀರವಾಗಿದ್ದೇವೆ. ಅಡ್ವೊಕೇಟ್‌ ಜನರಲ್‌ ಹಾಗೂ ಕಾನೂನು ತಜ್ಞರ ಜೊತೆ ನಿರಂತರ ಸಂಪರ್ಕದಲ್ಲಿದ್ದು, ಈಗಾಗಲೇ ಆಕ್ಷೇಪವನ್ನೂ ಸಲ್ಲಿಸಿದ್ದೇವೆ’ ಎಂದು ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು