ಶುಕ್ರವಾರ, ಏಪ್ರಿಲ್ 3, 2020
19 °C

ಬೆಂಗಳೂರಿಗೆ ಹೊರಟಿದ್ದ ಗೋಏರ್ ವಿಮಾನದಲ್ಲಿ ಬೆಂಕಿ: ಪ್ರಯಾಣಿಕರು ಪಾರು

ಪಿಟಿಐ Updated:

ಅಕ್ಷರ ಗಾತ್ರ : | |

GoAir

ಅಹಮದಾಬಾದ್: ಬೆಂಗಳೂರಿಗೆ ಹೊರಟಿದ್ದ ಗೋಏರ್ ವಿಮಾನದಲ್ಲಿ ಮಂಗಳವಾರ ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡು ಆತಂಕದ ಸನ್ನಿವೇಶ ನಿರ್ಮಾಣವಾಗಿತ್ತು.

ಸದ್ಯ ಬೆಂಕಿ ನಂದಿಸಲಾಗಿದ್ದು ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ತಕ್ಷಣಕ್ಕೆ ತಿಳಿದುಬಂದಿಲ್ಲ.

‘ಅಹಮದಾಬಾದ್‌ನಿಂದ ಬೆಂಗಳೂರಿಗೆ ಹೊರಟಿದ್ದ ಗೋಏರ್ ವಿಮಾನ ‘ಜಿ8 802’ರ ಬಲಭಾಗದ ಎಂಜಿನ್‌ಗೆ ಟೇಕ್‌ಆಫ್ ವೇಳೆ ಅನ್ಯವಸ್ತು ಡಿಕ್ಕಿಯಾದ ಅನುಮಾನವಿದೆ. ಡಿಕ್ಕಿಯ ಪರಿಣಾಮವಾಗಿ ಸಣ್ಣದಾಗಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು ಮತ್ತು ಸಿಬ್ಬಂದಿ ಸುರಕ್ಷಿತವಾಗಿದ್ದಾರೆ’ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ

‘ನಮ್ಮ ಪ್ರಯಾಣಿಕರು ಮತ್ತು ಸಿಬ್ಬಂದಿಯ ಸುರಕ್ಷತೆ ಅತ್ಯಂತ ಮಹತ್ವದ್ದಾಗಿದೆ. ಪ್ರಯಾಣಿಕರಿಗಾದ ಅನನುಕೂಲಕ್ಕಾಗಿ ವಿಷಾದಿಸುತ್ತೇವೆ’ ಎಂದೂ ಗೋಏರ್ ಹೇಳಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು