ಬಾಲಕಿಯರ ಬಂಧನ ಪ್ರಕರಣ: ಎಫ್‌ಐಆರ್‌ ದಾಖಲು

7

ಬಾಲಕಿಯರ ಬಂಧನ ಪ್ರಕರಣ: ಎಫ್‌ಐಆರ್‌ ದಾಖಲು

Published:
Updated:

ಜೈಪುರ: ರಾಜಸ್ಥಾನದ ರಾಜ್‌ಸಮಂದ್‌ ಜಿಲ್ಲೆಯ ಹೋಟೆಲ್‌ನಲ್ಲಿ ಕಳೆದ ವಾರ ಬಂಧಿಸಿದ್ದ 68 ಬಾಲಕಿಯರ ಪ್ರಕರಣಕ್ಕೆ ಸಂಬಂಧಿಸಿ ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಪ್ರಕರಣದಲ್ಲಿ ಸ್ವಯಂಘೋಷಿತ ದೇವ ಮಾನವ ವೀರೇಂದ್ರ ದೇವ್‌ ದೀಕ್ಷಿತ್‌ ಕೈವಾಡ ಇರಬಹುದು ಎಂಬ ಶಂಕೆಯನ್ನು ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ವ್ಯಕ್ತಪಡಿಸಿದೆ.

ಆರೋಪಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದೇವೆ. ಬಾಲಕಿಯರನ್ನು ಅಕ್ರಮವಾಗಿ ಇರಿಸಿದ್ದ ಸಂಘಟನೆ ಜತೆ ದೀಕ್ಷಿತ್‌ಗೆ ಸಂಬಂಧ ಇದೆಯೇ ಎಂಬುದನ್ನು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಈ ಬಾಲಕಿಯರು 5ರಿಂದ 16 ವರ್ಷ ಒಳಗಿನವರು. ನೇಪಾಳ, ಛತ್ತೀಸಗಡ, ಬಿಹಾರ, ಮಧ್ಯಪ್ರದೇಶ ಮೂಲದ ಇವರನ್ನು ಪೊಲೀಸ್ ಇಲಾಖೆ ಹಾಗೂ ಮಕ್ಕಳ ಕಲ್ಯಾಣ ಸಮಿತಿ ಜಂಟಿ ಕಾರ್ಯಾಚರಣೆ ನಡೆಸಿ ಜುಲೈ 4ರಂದು ರಕ್ಷಿಸಿತ್ತು. 

 

 

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !