ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಬಿಜೆಪಿ ಕಾರ್ಯಕರ್ತನ ಸಾವಿಗೆ ನ್ಯಾಯ ದೊರಕಿಸುತ್ತೀರಾ’

ಅಮಿತ್‌ ಶಾಗೆ ವಿನಾಯಕ ಬಾಳಿಗ ಕುಟುಂಬದವರ ಪ್ರಶ್ನೆ
Last Updated 8 ಮೇ 2018, 13:52 IST
ಅಕ್ಷರ ಗಾತ್ರ

ಮಂಗಳೂರು: ನಗರದ ವಿನಾಯಕ ಬಾಳಿಗ ಅವರ ಮನೆಯ ಆವರಣದಲ್ಲಿ ಸೋಮವಾರ ರಾಷ್ಟ್ರಪ್ರೇಮಿ ಸಂಘಟನೆಗಳ ಒಕ್ಕೂಟದ ಪ್ರೊ.ನರೇಂದ್ರ ನಾಯಕ್‌ ಮತ್ತು ದಲಿತ ಸಂಘರ್ಷ ಸಮಿತಿ (ಪ್ರೊ.ಬಿ.ಕೃಷ್ಣಪ್ಪ ಬಣ) ಸಂಚಾಲಕ ರಘು ಎಕ್ಕಾರ್‌ ಅವರೊಂದಿಗೆ ಪತ್ರಿಕಾಗೋಷ್ಠಿ ನಡೆಸಿದ ವಿನಾಯಕ ಬಾಳಿಗ ಅವರ ತಂದೆ ರಾಮಚಂದ್ರ ಬಾಳಿಗ ಮತ್ತು ಸಹೋದರಿಯರಾದ ಶ್ವೇತಾ, ಉಷಾ, ಅನುರಾಧಾ ಮತ್ತು ಹರ್ಷಾ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಿಗೆ ಬರೆದಿರುವ ಪತ್ರವನ್ನು ಬಿಡುಗಡೆ ಮಾಡಿದರು.

‘ನೀವು ಚುನಾವಣಾ ಪ್ರಚಾರದುದ್ದಕ್ಕೂ ಬಿಜೆಪಿ ಕಾರ್ಯಕರ್ತರ ಕೊಲೆ ವಿಚಾರ ಪ್ರಸ್ತಾಪಿಸುತ್ತಿದ್ದೀರಿ. ವಿನಾಯಕ ಬಾಳಿಗ ಕೊಲೆ ಬಗ್ಗೆ ಏಕೆ ಮಾತನಾಡುತ್ತಿಲ್ಲ? ವಿನಾಯಕ ಬಾಳಿಗ ಪಕ್ಷದ ಸಕ್ರಿಯ ಕಾರ್ಯಕರ್ತನಾಗಿದ್ದರೂ ಅವರ ಕೊಲೆ ವಿಚಾರದಲ್ಲಿ ನಿಮ್ಮ ಪಕ್ಷ ಏಕೆ ಪ್ರತಿಭಟನೆ ನಡೆಸಿಲ್ಲ. ಸಂಸದ ನಳಿನ್‌ಕುಮಾರ್‌ ಕಟೀಲ್‌ ಸೇರಿದಂತೆ ಪಕ್ಷದ ಯಾವೊಬ್ಬ ನಾಯಕರೂ ನಮ್ಮ ಕುಟುಂಬದವರನ್ನು ಭೇಟಿಮಾಡಿ ಸಾಂತ್ವನ ಹೇಳದಿರುವುದಕ್ಕೆ ಕಾರಣವೇನು’ ಎಂದು ಪತ್ರದಲ್ಲಿ ಪ್ರಶ್ನಿಸಲಾಗಿದೆ.

‘ಬಿಜೆಪಿ ಮಹಿಳಾ ಮೋರ್ಚಾ ಸಂಚಾಲಕಿ ಮೀನಾಕ್ಷಿ ಲೇಖಿ ಅವರ ಗಮನಕ್ಕೆ ಈ ವಿಚಾರ ತರಲು ಯತ್ನಿಸಿದಾಗ, ಇದು ಸ್ಥಳೀಯ ವಿಚಾರವಾಗಿದ್ದು ಅಲ್ಲಿಯೇ ಮಾತನಾಡಿ ಎಂದರು. ಸ್ಥಳೀಯ ಸಂಸದರ ಬಳಿ ಚರ್ಚೆಗೆ ಹೋದಾಗ ಅವರೇಕೆ ನಮ್ಮನ್ನು ದೂರ ಸರಿಸಿ ಹೊರಟು ಹೋದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT