ಶನಿವಾರ, ಡಿಸೆಂಬರ್ 7, 2019
25 °C

ಮೋಕ್ಷಗುಂಡಂ ವಿಶ್ವೇಶ್ವರಯ್ಯ 157ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಗೌರವ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸರ್ ಎಂ.ವಿ ಎಂದೇ ಜನಪ್ರಿಯರಾಗಿದ್ದ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರ 157ನೇ ಜನ್ಮದಿನಕ್ಕೆ ಗೂಗಲ್ ಡೂಡಲ್ ಮೂಲಕ ಗೌರವ ಸಲ್ಲಿಸಿದೆ. ಸರ್ ಎಂ.ವಿ ಅವರ ಜನ್ಮದಿನವನ್ನು ಇಂಜಿನಿಯರ್ ದಿನ ಆಗಿ ಆಚರಿಸಲಾಗುತ್ತಿದೆ.

ಮೋಕ್ಷಗುಂಡಂ ವಿಶ್ವೇಶ್ವರಯ್ಯ ಹುಟ್ಟಿದ್ದು ಸೆಪ್ಟೆಂಬರ್ 15, 1861ರಂದು. ಹುಟ್ಟೂರು ಮುದ್ದೇನಹಳ್ಳಿ. ಚಿಕ್ಕಬಳ್ಳಾಪುರದಲ್ಲಿ ಪ್ರಾಥಮಿಕ ಮತ್ತು ಬೆಂಗಳೂರಿನಲ್ಲಿ ಪ್ರೌಢಶಿಕ್ಷಣ ಮುಗಿಸಿದರು. 1881ರಲ್ಲಿ ಮದರಾಸು ವಿಶ್ವವಿದ್ಯಾಲಯದಿಂದ ಪದವಿ ಪಡೆದು ನಂತರ ಪುಣೆಯ ವಿಜ್ಞಾನ ಕಾಲೇಜಿನಲ್ಲಿ ಎಂಜಿನಿಯರಿಂಗ್ ಪದವಿ ಪಡೆದರು. ಮುಂಬೈ ಸರ್ಕಾರದ ಲೋಕೋಪಯೋಗಿ ಇಲಾಖೆಯಲ್ಲಿ ಸಹಾಯಕ ಎಂಜಿನಿಯರ್ ಆಗಿ ವೃತ್ತಿ ಜೀವನ ಆರಂಭಿಸಿದರು (೧೮೮೪). ಇದಾದ ಮೇಲೆ ಭಾರತೀಯ ನೀರಾವರಿ ಕಮಿಷನ್ ಸೇರಿದರು. ಆಗ ದಖನ್ ಪ್ರಸ್ಥಭೂಮಿಯಲ್ಲೇ ಉತ್ತಮವಾದ ನೀರಾವರಿ ವ್ಯವಸ್ಥೆ ಮಾಡಿದರು.

1912-1918ರ ಅವಧಿಯಲ್ಲಿ ಮೈಸೂರಿನ ದಿವಾನರಾಗಿ ಸೇವೆ ಸಲ್ಲಿಸಿದ್ದರು. ವಿಶ್ವೇಶ್ವರಯ್ಯನವರು ದಿವಾನರಾಗಿದ್ದಾಗ ಬ್ರಿಟಿಷ್ ಸರ್ಕಾರ ಅವರಿಗೆ "ಸರ್" ಪದವಿಯನ್ನು ನೀಡಿತ್ತು. 1955ರಲ್ಲಿ  ಭಾರತ ಸರ್ಕಾರ ದೇಶ  ಪರಮೋನ್ನತ ಪ್ರಶಸ್ತಿಯಾದ ಭಾರತ ರತ್ನ ನೀಡಿ ಗೌರವಿಸಿತು.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು