ಸೋಮವಾರ, ಮಾರ್ಚ್ 30, 2020
19 °C

ಸರ್ಕಾರದಿಂದ ಕೋವಿಡ್‌–19 'ವಿಪತ್ತು' ಅಧಿಸೂಚನೆ: ₹4 ಲಕ್ಷ ಪರಿಹಾರ ಘೋಷಣೆ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ಬೆಂಗಳೂರಿನ ರೈಲ್ವೆ ನಿಲ್ದಾಣದ ಸಮೀಪ ಮಾಸ್ಕ್ ಧರಿಸಿ ನಿಂತಿರುವ ಪ್ರಯಾಣಿಕರು– ಸಂಗ್ರಹ ಚಿತ್ರ

ನವದೆಹಲಿ: ಕೇಂದ್ರ ಸರ್ಕಾರ 'ಕೋವಿಡ್‌–19' ರೋಗವನ್ನು ಅಧಿಸೂಚಿತ ವಿಪತ್ತು ಎಂದು ಪರಿಗಣಿಸಲಿದ್ದು, ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್‌) ಅಡಿಯಲ್ಲಿ ಸಹಕಾರ ನೀಡಲಿದೆ. ಹಾಗೂ ಕೊರೊನಾ ವೈರಸ್‌ ಸೋಂಕಿನಿಂದಾಗಿ ಮೃತಪಟ್ಟಿರುವ ವ್ಯಕ್ತಿಯ ಕುಟುಂಬಕ್ಕೆ ಪರಿಹಾರ ನೀಡಲಿದೆ. 

ಎಸ್‌ಡಿಆರ್‌ಎಫ್‌ ಅಡಿಯಲ್ಲಿ ಸಹಕಾರ ನೀಡಲು ಉದ್ದೇಶಿಸಿರುವ ಕೇಂದ್ರ ಗೃಹ ಸಚಿವಾಲಯ, ಕೋವಿಡ್–19ನ್ನು ಅಧಿಸೂಚಿತ ವಿಪತ್ತು ಎಂದು ಪರಿಗಣಿಸಿ ₹4 ಲಕ್ಷ ಪರಿಹಾರ ನೀಡಲು ನಿರ್ಧರಿಸಿದೆ. ಈ ಕುರಿತು ಎಲ್ಲ ರಾಜ್ಯಗಳ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ರವಾನಿಸಿದೆ. 

ಕೋವಿಡ್‌–19ಗೆ ತುತ್ತಾದವರು, ಕೊರೊನಾ ವೈರಸ್‌ ಸೋಂಕು ಹರಡದಂತೆ ತಡೆಯುವ ಹಾಗೂ ಕೋವಿಡ್‌–19 ದೃಢಪಟ್ಟವರ ಚಿಕಿತ್ಸೆ ಕಾರ್ಯಗಳಲ್ಲಿ ಭಾಗಿಯಾಗುವವರೂ ಸೋಂಕಿಗೆ ಒಳಗಾಗಿ ಸಾವಿಗೀಡಾದರೆ ಅವರ ಕುಟುಂಬಗಳಿಗೂ ಸರ್ಕಾರದಿಂದ 4 ಲಕ್ಷ ರೂಪಾಯಿ ಪರಿಹಾರ ಸಿಗಲಿದೆ. 

ಕೊರೊನಾ ವೈರಸ್‌ ಸೋಂಕಿನಿಂದಾಗಿ ಭಾರತದಲ್ಲಿ ಇಬ್ಬರು ಮೃತಪಟ್ಟಿರುವುದು ದೃಢಪಟ್ಟಿದೆ ಹಾಗೂ 80ಕ್ಕೂ ಹೆಚ್ಚು ಜನರಿಗೆ ಸೋಂಕು ಹರಡಿದೆ. ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳು ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಿವೆ. ಶಾಪಿಂಗ್‌ ಮಾಲ್‌ಗಳು, ಚಿತ್ರಮಂದಿರಗಳ ಕಾರ್ಯಾಚರಣೆಗೂ ನಿರ್ಬಂಧ ಹೇರಲಾಗಿದೆ. 

ಕೋವಿಡ್‌–19 ಸಾಂಕ್ರಾಮಿಕ ರೋಗ ಎಂದು ವಿಶ್ವ ಆರೋಗ್ಯ ಸಂಸ್ಥೆ ಇತ್ತೀಚೆಗೆ ಘೋಷಿಸಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು