ಸೋಮವಾರ, ಮಾರ್ಚ್ 30, 2020
19 °C

ದೇಶದಾದ್ಯಂತ ಹೆದ್ದಾರಿ ಟೋಲ್‌ ಸಂಗ್ರಹ ತಾತ್ಕಾಲಿಕ ರದ್ದು: ಕೇಂದ್ರ ಸರ್ಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ದೇಶದ ಎಲ್ಲಾ ಟೋಲ್‌ ಪ್ಲಾಜಾಗಳಲ್ಲಿ ಶುಲ್ಕ ಸಂಗ್ರಹಣೆಯನ್ನು ಬುಧವಾರ ರಾತ್ರಿಯಿಂದಲೇ ಕೇಂದ್ರ ಸರ್ಕಾರ ತಾತ್ಕಾಲಿಕವಾಗಿ ರದ್ದು ಮಾಡಿದೆ.

ಕೊರೊನಾ ವೈರಸ್‌ ಭೀತಿ ಇರುವ ಈ ಸಂದರ್ಭದಲ್ಲಿ ಅಗತ್ಯ ಸೇವೆಗಳು ತುರ್ತಾಗಿ ಲಭ್ಯವಾಗಬೇಕೆಂಬ ಉದ್ದೇಶಕ್ಕೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.

‘ಕೋವಿಡ್‌ 19 ಹಿನ್ನೆಲೆಯಲ್ಲಿ ದೇಶದ ಟೋಲ್‌ ಪ್ಲಾಜಾಗಳಲ್ಲಿ ಟೋಲ್‌ ಸಂಗ್ರಹವನ್ನು ತಾತ್ಕಾಲಿಕವಾಗಿ ಸರ್ಕಾರ ನಿರ್ಬಂಧಿಸಿದೆ,’ ಎಂದು ಕೇಂದ್ರ ಸಾರಿಗೆ ಸಚಿವ ನಿತಿನ್‌ ಗಡ್ಕರಿ ಹೇಳಿದ್ದಾರೆ. ‘ತುರ್ತು ಸೇವೆಗಳಿರುವ ತೊಡಕು ನಿವಾರಿಸಲಷ್ಟೇ ಈ ನಿರ್ಧಾರ ಕೈಗೊಂಡಿಲ್ಲ. ಬದಲಿಗೆ ಸಮಯ ಉಳಿಸುವ ಸಲುವಾಗಿಯೂ ಈ ತೀರ್ಮಾನ ಮಾಡಲಾಗಿದೆ ಎಂದು ಗಡ್ಕರಿ ಹೇಳಿದ್ದಾರೆ.

ರಸ್ತೆಗಳ ನಿರ್ವಹಣೆ ಮತ್ತು ಹೆದ್ದಾರಿ ತುರ್ತು ಸೇವೆಗಳು ಎಂದಿನಂತೇ ಲಭ್ಯವಾಗಲಿವೆ ಎಂದೂ ಅವರು ಸ್ಪಷ್ಟಪಡಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು