ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯಪ್ರದೇಶ: ನಾಳೆಯೇ ವಿಶ್ವಾಸಮತ ಸಾಬೀತಿಗೆ ರಾಜ್ಯಪಾಲರ ಸೂಚನೆ

Last Updated 16 ಮಾರ್ಚ್ 2020, 12:45 IST
ಅಕ್ಷರ ಗಾತ್ರ

ಭೋ‍‍ಪಾಲ್‌:ಮಧ್ಯಪ್ರದೇಶ ರಾಜ್ಯದ ರಾಜಕಾರಣ ಮತ್ತೊಂದು ತಿರುವು ಪಡೆದುಕೊಂಡಿದ್ದು ನಾಳೆಯೇ ವಿಶ್ವಾಸಮತ ಸಾಬೀತು ಪಡಿಸುವಂತೆ ಮುಖ್ಯಮಂತ್ರಿ ಕಮಲನಾಥ್‌ ಸರ್ಕಾರಕ್ಕೆ ರಾಜ್ಯಪಾಲರು ಸೂಚಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರ ನೇತೃತ್ವದಲ್ಲಿಬಿಜೆಪಿಯ 106 ಶಾಸಕರು ರಾಜ್ಯಪಾಲರನ್ನು ಭೇಟಿ ಮಾಡಿದ್ದರು. ಕಾಂಗ್ರೆಸ್‌ ಪಕ್ಷದ 22 ಶಾಸಕರು ರಾಜಿನಾಮೆ ನೀಡಿದ್ದು ಸರ್ಕಾರ ಅಲ್ಪ ಮತಕ್ಕೆ ಕುಸಿದಿದೆ. ಶೀಘ್ರದಲ್ಲಿ ವಿಶ್ವಾಸಮತಯಾಚನೆ ಆಗದಿದ್ದರೆ ಕುದುರೆ ವ್ಯಾಪಾರ ನಡೆಯುವ ಸಾಧ್ಯತೆಗಳಿವೆ ಎಂದು ರಾಜ್ಯಪಾಲರಗೆ ಮನವಿ ಮಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಜ್ಯಪಾಲ ಲಾಲ್‌ ಜೀ ಟಂಡನ್‌ ಅವರು ನಾಳೆಯೇ ವಿಶ್ವಾಸಮತ ಸಾಬೀತು ಪಡಿಸುವಂತೆ ಕಮಲನಾಥ್ ಸರ್ಕಾರಕ್ಕೆ ಸೂಚಿಸಿದ್ದಾರೆ.

ಕೊರೊನಾ ಸೋಂಕಿನ ಭೀತಿಯ ನಡುವೆಯೂ ಮಧ್ಯಪ್ರದೇಶ ರಾಜಭವನ ಸೋಮವಾರ ಅತ್ಯಂತ ಚಟುವಟಿಕೆಯ ಸ್ಥಳವಾಗಿತ್ತು. ವಿಧಾನಸಭೆಯಲ್ಲಿ ಅವಿಶ್ವಾಸ ನಿರ್ಣಯ ಮಂಡಿಸಬೇಕೆಂದಿದ್ದ ಬಿಜೆಪಿಯ ಪ್ರಯತ್ನವನ್ನು ರಾಜ್ಯಪಾಲರು ಹಾಗೂ ಸ್ಪೀಕರ್ ಜಂಟಿಯಾಗಿ ಅಧಿವೇಶನದಲ್ಲಿ ಪಾಲ್ಗೊಂಡು ವಿಧಾನಸಭೆಯ ಕಲಾಪಗಳನ್ನು ಮಾರ್ಚ್ 26ಕ್ಕೆ ಮುಂದೂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT