ಮಂಗಳವಾರ, ಜೂನ್ 2, 2020
27 °C

ಒಸಿಐ ಕಾರ್ಡ್ ಹೊಂದಿರುವವರಿಗೆ ತಾಯ್ನಾಡಿಗೆ ಮರಳಲು ಅವಕಾಶ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ : ವಿದೇಶದಲ್ಲಿ ಸಿಲುಕಿರುವ ಸಾಗರೋತ್ತರ ಭಾರತೀಯ ನಾಗರಿಕ ಕಾರ್ಡ್ (ಒಸಿಐ)‌ ಹೊಂದಿರುವವರ ಪೈಕಿ ಕೆಲವರಿಗೆ ತಾಯ್ನಾಡಿಗೆ ಮರಳಲು ಕೇಂದ್ರ ಸರ್ಕಾರ ಶುಕ್ರವಾರ ಅನುಮತಿ ನೀಡಿದೆ. 

ಕೌಟುಂಬಿಕ ತುರ್ತು ಕಾರಣಕ್ಕೆ ಮರಳಲು ಗೃಹ ಸಚಿವಾಲಯ ಅನುಮತಿ ನೀಡಿದೆ. ವಿದೇಶದಲ್ಲಿದ್ದು, ಒಸಿಐ ಕಾರ್ಡ್‌ ಹೊಂದಿರುವ ಭಾರತೀಯರ ಮಕ್ಕಳು, ದಂಪತಿ ಪೈಕಿ ಒಬ್ಬರು ಕಾರ್ಡ್ ಹೊಂದಿದ್ದು, ಮತ್ತೊಬ್ಬರು ಭಾರತೀಯ ನಾಗರಿಕರಾಗಿದ್ದು, ಇಲ್ಲಿ ಶಾಶ್ವತ ನಿವಾಸ ಹೊಂದಿರುವವರಿಗೆ, ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಭಾರತಕ್ಕೆ ಮರಳಲು ಅವಕಾಶ ಮಾಡಿಕೊಡಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು