ಶನಿವಾರ, ಜನವರಿ 16, 2021
21 °C
ಪ್ರಧಾನಿ ಮೋದಿ ನೇತೃತ್ವದಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿರ್ಧಾರ

ಜಮಾತ್‌ ಇಸ್ಲಾಮಿ ಸಂಘಟನೆ ನಿಷೇಧಿಸಿದ ಕೇಂದ್ರ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಭಯೋತ್ಪಾದನೆ ನಿಗ್ರಹ ಕಾನೂನಿನಡಿ ಜಮಾತ್‌ ಎ ಇಸ್ಲಾಮಿ ಜಮ್ಮು ಮತ್ತು ಕಾಶ್ಮೀರ ಸಂಘಟನೆಯನ್ನು ಐದು ವರ್ಷಗಳವರೆಗೆ ನಿಷೇಧಿಸಲಾಗಿದೆ.

ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಗುರುವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ನಿಷೇಧ ನಿರ್ಧಾರವನ್ನು ಕೈಗೊಳ್ಳಲಾಗಿದೆ. ನಿಷೇಧ ಸಂಬಂಧ ಗೃಹವ್ಯವಹಾರಗಳ ಸಚಿವಾಲಯ ಮಾಹಿತಿ ನೀಡಿದೆ.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರವಾದ ಮತ್ತು ಭಯೋತ್ಪಾದನೆಗೆ ಬೆಂಬಲ ನೀಡುತ್ತಿರುವ ಹಾಗೂ ಉಗ್ರರ ಗುಂಪುಗಳ ಜತೆ ನಂಟು ಹೊಂದಿರುವ ಜಮಾತ್ ಸಂಘಟನೆಯನ್ನು ನಿಷೇಧಿಸಲಾಗಿದೆ ಎಂದು ಹೇಳಿಕೆ ತಿಳಿಸಿದೆ.

ಜಮಾತ್ ಸಂಘಟನೆಯ ಹಲವರನ್ನು ಕೆಲವು ದಿನಗಳ ಹಿಂದೆ ಜಮ್ಮು ಮತ್ತು ಕಾಶ್ಮೀರದ ಪೊಲೀಸರು ಬಂಧಿಸಿದ ನಂತರ ಈಗ ನಿಷೇಧ ಮಾಡಲಾಗಿದೆ.

ಪುಲ್ವಾಮಾದಲ್ಲಿ ಸಿಆರ್‌ಪಿಎಫ್‌ ಯೋಧರ ಮೇಲೆ ಪಾಕಿಸ್ತಾನದ ಉಗ್ರರು ದಾಳಿ ನಡೆಸಿದ ನಂತರ ಜಮಾತ್‌ ನಿಷೇಧ ಮಹತ್ವ ಪಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು