ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಪೋಕ್ಸೊ ಕಾಯ್ದೆ ಕಠಿಣಗೊಳಿಸಲು ಕ್ರಮ’

Last Updated 17 ಜುಲೈ 2019, 17:50 IST
ಅಕ್ಷರ ಗಾತ್ರ

ನವದೆಹಲಿ: ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳ ಇತ್ಯರ್ಥಕ್ಕೆ ತ್ವರಿತ ವಿಚಾರಣಾ ನ್ಯಾಯಾಲಯಗಳನ್ನು ರಚಿಸಲು ಹಾಗೂ ಪೋಕ್ಸೊ ಕಾಯ್ದೆಯನ್ನು ಮತ್ತಷ್ಟು ಕಠಿಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಹೇಳಿದೆ.

ಈ ನಿಟ್ಟಿನಲ್ಲಿ ಎರಡು ಪ್ರಮುಖ ಕಾನೂನುಗಳಿಗೆ ತಿದ್ದುಪಡಿ ತರಲು ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹವ್ಯವಹಾರಗಳ ಸಚಿವಾಲಯದ ರಾಜ್ಯ ಖಾತೆ ಸಚಿವ ಜಿ.ಕಿಶನ್ ರೆಡ್ಡಿ ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ.

‘ಸಾಮಾಜಿಕ ಜಾಲತಾಣಗಳ ಮೂಲಕ ಮಕ್ಕಳ ಮೇಲೆ ದೌರ್ಜನ್ಯ ನಡೆಯುತ್ತಿರುವುದು ಆತಂಕಕಾರಿ ಬೆಳವಣಿಗೆ. ಇದು ದೇಶಕ್ಕೆ ಹಾಗೂ ವಿಶ್ವಕ್ಕೆ ದೊಡ್ಡ ಸವಾಲಾಗಿ ಪರಿಣಮಿಸಲಿದೆ. ಮಕ್ಕಳ ಶಾಲಾಪಠ್ಯಗಳಲ್ಲಿ ಈ ವಿಷಯ ಅಳವಡಿಸಬೇಕು’ ಎಂದು ರೆಡ್ಡಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT