ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

13ರಂದು ಮುಷ್ಕರ ನಡೆಸಿದರೆ ಕಠಿಣ ಕ್ರಮ: ನೌಕರರಿಗೆ ಕೇಂದ್ರ ಸರ್ಕಾರ ಎಚ್ಚರಿಕೆ

Last Updated 6 ಮಾರ್ಚ್ 2019, 11:38 IST
ಅಕ್ಷರ ಗಾತ್ರ

ನವದೆಹಲಿ: ನೂತನ ಪಿಂಚಣಿ ಯೋಜನೆ (ಎನ್‌ಪಿಎಸ್‌) ವಿರೋಧಿಸಿ ಮಾರ್ಚ್‌ 13ರಂದು ಮುಷ್ಕರ ಹೂಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ತನ್ನ ನೌಕರರಿಗೆ ಎಚ್ಚರಿಕೆ ನೀಡಿದೆ.

‘ಯಾವುದೇ ರೀತಿಯ ಮುಷ್ಕರ ನಡೆಸುವ ನೌಕರರ ವೇತನದಲ್ಲಿ ಕಡಿತ ಮಾಡಲಾಗುವುದು. ಇದರ ಜೊತೆಗೆ ಶಿಸ್ತುಕ್ರಮವನ್ನೂ ಜರುಗಿಸಲಾಗುವುದು’ ಎಂದು ಕೇಂದ್ರದ ಸಿಬ್ಬಂದಿ ಸಚಿವಾಲಯ ಹೇಳಿದೆ.

‘ಮುಷ್ಕರ ನಡೆಸಲು ನಿಗದಿಪಡಿಸಿರುವ ಅವಧಿಯಲ್ಲಿ ಯಾವುದೇ ನೌಕರಗೆ ರಜೆ ನೀಡಬಾರದು. ಕರ್ತವ್ಯ ನಿರ್ವಹಿಸಲು ಬರುವ ನೌಕರರು ಕಚೇರಿಯನ್ನು ಪ್ರವೇಶಿಸಲು ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಬೇಕು’ ಎಂದು ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ದೇಶದಲ್ಲಿ 48.41 ಲಕ್ಷ ಕೇಂದ್ರ ಸರ್ಕಾರಿ ನೌಕರರು ಇದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT