ಗುರುವಾರ , ಆಗಸ್ಟ್ 13, 2020
24 °C

ಗ್ರೆನೇಡ್‌ ದಾಳಿ: ಇಬ್ಬರು ಪೊಲೀಸರಿಗೆ ಗಾಯ

ಪಿಟಿಐ Updated:

ಅಕ್ಷರ ಗಾತ್ರ : | |

ಶ್ರೀನಗರ: ಶ್ರೀನಗರದ ಜೀರೊ ಸೇತುವೆ ಬಳಿ ಉಗ್ರರು ನಡೆಸಿದ ಗ್ರೆನೇಡ್‌ ದಾಳಿಯಲ್ಲಿ ಇಬ್ಬರು ಸಂಚಾರ ಪೊಲೀಸರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಜ್‌ಬಾಘ್‌ನಲ್ಲಿರುವ ಈ ಸೇತುವೆಯ ಟ್ರಾಫಿಕ್‌ ಸಿಗ್ನಲ್‌ ಬಳಿ ಉಗ್ರರು ಗುರುವಾರ ದಾಳಿ ನಡೆಸಿದ್ದು, ಅವರ ಪತ್ತೆಗೆ ಭದ್ರತಾ ಸಿಬ್ಬಂದಿ ಶೋಧ ಆರಂಭಿಸಿದ್ದಾರೆ ಎಂದು ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ದಾಳಿ ನಡೆದ 100 ಮೀಟರ್ ದೂರದಲ್ಲಿ ನ್ಯಾಷನಲ್ ಕಾನ್ಫರೆನ್ಸ್‌ ಪಕ್ಷದ (ಎನ್‌ಸಿಪಿ) ಮುಖ್ಯ ಕಚೇರಿ ಹಾಗೂ ಆಲ್‌ ಇಂಡಿಯಾ ರೇಡಿಯೊದ ಸ್ಥಳೀಯ ಕಚೇರಿ ಇದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು