ಉಗ್ರರಿಂದ ಗ್ರೆನೇಡ್ ದಾಳಿ-6 ಮಂದಿ ಸಿಆರ್ಪಿಎಫ್ ಯೋಧರಿಗೆ ಗಾಯ

ಜಮ್ಮು-ಕಾಶ್ಮೀರ: ಶ್ರೀನಗರದಲ್ಲಿ ಭಯೋತ್ಪಾದಕರು ದಾಳಿ ನಡೆಸಿದ ಪರಿಣಾಮ 6 ಮಂದಿ ಸಿಆರ್ಪಿಎಫ್ ಯೋಧರು ಗಾಯಗೊಂಡಿದ್ದಾರೆ.
ಶ್ರೀನಗರದ ಕರಣ್ನಗರದಲ್ಲಿ ಈ ಘಟನೆ ನಡೆದಿದ್ದು, ಉಗ್ರರು ಗ್ರೆನೇಡ್ ದಾಳಿ ನಡೆಸಿದ ಪರಿಣಾಮ ಗಸ್ತಿನಲ್ಲಿದ್ದ 6 ಮಂದಿ ಕೇಂದ್ರ ಮೀಸಲು ಪೊಲೀಸ್ ಪಡೆಯ 6 ಮಂದಿ ತೀವ್ರ ಗಾಯಗೊಂಡಿದ್ದಾರೆ.
ವಿಷಯ ತಿಳಿಯುತ್ತಿದ್ದಂತೆ ಹೆಚ್ಚಿನ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿದ್ದು, ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಶನಿವಾರ ರಾತ್ರಿ ಈ ಘಟನೆ ನಡೆದಿದ್ದು, ಉಗ್ರರನ್ನು ಸದೆಬಡಿಯುವ ನಿಟ್ಟಿನಲ್ಲಿ ಭಾರತೀಯ ಸೇನೆ ತನ್ನ ಪ್ರಯತ್ನ ಮುಂದುವರಿಸಿದೆ. ಗಾಯಗೊಂಡವರನ್ನು ಸೇನೆಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗುತ್ತಿದೆ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.