ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಂಜಾಬ್‌ ಗ್ರನೇಡ್ ದಾಳಿ: ವ್ಯಕ್ತಿಯೊಬ್ಬನ ಬಂಧನ

ಐಎಸ್‌ಐ ಉಗ್ರರ ಪಾತ್ರದ ಶಂಕೆ
Last Updated 21 ನವೆಂಬರ್ 2018, 12:15 IST
ಅಕ್ಷರ ಗಾತ್ರ

ಚಂಡೀಗಡ: ಪಂಜಾಬ್‌ನ ಅಮೃತಸರದಲ್ಲಿ ನಿರಂಕಾರಿ ಪಂಥದ ಪ್ರಾರ್ಥನಾ ಮಂದಿರದ ಮೇಲೆ ನಡೆದ ಗ್ರನೇಡ್ ದಾಳಿ ಸಂಬಂಧ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಈ ದಾಳಿಗೆ ಬಳಕೆಯಾದ ಗ್ರನೇಡ್ ಪಾಕಿಸ್ತಾನಕ್ಕೆ ಸಂಬಂಧಿಸಿದ್ದು. ಇದರಲ್ಲಿ ಪಾಕಿಸ್ತಾನದ ಐಎಸ್ಐ ಉಗ್ರರ ಕೈವಾಡವಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹೇಳಿದ್ದಾರೆ.

ಈ ದಾಳಿಯಲ್ಲಿ ಪಾಕಿಸ್ತಾನದ ಐಎಸ್‌ಐ ಉಗ್ರ ಸಂಘಟನೆ ಭಾಗಿಯಾಗಿದೆ. ಇದರ ಉದ್ದೇಶನಮ್ಮ ರಾಜ್ಯದಲ್ಲಿಶಾಂತಿ ಕದಡುವುದಾಗಿತ್ತುಎಂದು ಬೇಸರ ವ್ಯಕ್ತಪಡಿಸಿದರು.

ಅಮೃತಸರದ ಹೊರವಲಯದಲ್ಲಿರುವ ನಿರಂಕಾರಿ ಭವನದಲ್ಲಿ ಧಾರ್ಮಿಕ ಸಭೆಯ ಕಾರಣಕ್ಕೆ ಭಕ್ತಾದಿಗಳು ಸೇರಿದ್ದರು. ಈ ವೇಳೆ ನಡೆದ ಗ್ರನೇಡ್ ದಾಳಿಯಲ್ಲಿ ಮೂವರು ಮೃತಪಟ್ಟಿದ್ದರು. 20ಮಂದಿ ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT