ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೇಜ್ರಿವಾಲ್ ನಿವಾಸದೆದುರು ಪ್ರತಿಭಟನೆ: ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

ದೆಹಲಿ ಹಿಂಸಾಚಾರ
Last Updated 26 ಫೆಬ್ರುವರಿ 2020, 4:33 IST
ಅಕ್ಷರ ಗಾತ್ರ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಮತ್ತು ನಗರದಲ್ಲಿ ಶಾಂತಿ ಪುನಃಸ್ಥಾಪಿಸಲು ಒತ್ತಾಯಿಸಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಎಎಜೆಎಂಐ) ಮತ್ತು ಜಾಮಿಯಾ ಸಮನ್ವಯ ಸಮಿತಿ (ಜೆಸಿಸಿ) ಬುಧವಾರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ನಿವಾಸದ ಹೊರಗೆ ಪ್ರತಿಭಟನೆ ನಡೆಸಿದ್ದಾರೆ.

ಕೇಜ್ರಿವಾಲ್ ನಿವಾಸದ ಎದುರು ಜಮಾಯಿಸಿದ ಗುಂಪು, ದೆಹಲಿಯಲ್ಲಿ ಹಿಂಸಾಚಾರಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು. ಅಲ್ಲದೆ ಕೇಜ್ರಿವಾಲ್ ಅವರ ನಿವಾಸಕ್ಕೆ ಘೇರಾವ್ ಹಾಕಿದರು.

ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಜ್ರಿವಾಲ್ ಅವರಿಗೆ ಮನವಿ ಮಾಡಿದ ಅವರು, ಸ್ಥಳೀಯ ಶಾಸಕರೊಂದಿಗೆ ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ವೈಯಕ್ತಿಕವಾಗಿ ಭೇಟಿ ನೀಡಿ ಉದ್ವಿಗ್ನತೆಯನ್ನು ನಿಯಂತ್ರಿಸಲು ಶಾಂತಿ ಮೆರವಣಿಗೆಗಳನ್ನು ಆಯೋಜಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.

ದೆಹಲಿ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ನಾಗರಿಕರಿಗೆ ತಿಳಿಸಬೇಕು ಮತ್ತು ಎಲ್ಲಾ ರಕ್ಷಣಾ ಕಾರ್ಯಾಚರಣೆಗಳಿಗೆ ಹಿಂಸಾಚಾರ ಪೀಡಿತ ಪ್ರದೇಶಗಳಿಂದ ಆಸ್ಪತ್ರೆಗಳನ್ನು ತಲುಪಲು ಅವಕಾಶ ನೀಡಬೇಕು. ಹಿಂಸಾಚಾರದ ಹಿಂದಿರುವ ದುಷ್ಕರ್ಮಿಗಳನ್ನು ಗುರುತಿಸಿ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಎಂದು ಒತ್ತಾಯಿಸಿದರು.

ಅಧಿಕಾರಿಗಳೊಂದಿಗೆಕೇಜ್ರಿವಾಲ್ಸಭೆ

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ನಿವಾಸದಲ್ಲಿ ಮಂಗಳವಾರ ತಡರಾತ್ರಿ ಶಾಸಕರು ಮತ್ತು ದೆಹಲಿಯ ಹಿಂಸಾಚಾರ ಪೀಡಿತ ಪ್ರದೇಶಗಳ ಅಧಿಕಾರಿಗಳ ತುರ್ತು ಸಭೆ ಕರೆದಿದ್ದರು. ಸಭೆಯಲ್ಲಿ ಪರಿಸ್ಥಿತಿಯನ್ನು ನಿಭಾಯಿಸಲು ಮತ್ತು ಶಾಂತಿಯನ್ನು ಪುನಃಸ್ಥಾಪಿಸಲು ಅಗತ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು.

ಅಮಿತ್ ಶಾ ಸಭೆ

ಕಳೆದ ಎರಡು ದಿನಗಳಿಂದ ದೆಹಲಿಯಲ್ಲಿ ಉಲ್ಬಣಗೊಳ್ಳುತ್ತಿರುವ ಹಿಂಸಾಚಾರದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ದೆಹಲಿ ಪೊಲೀಸ್ ಮತ್ತು ಗೃಹ ಸಚಿವಾಲಯದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್‌ಎಸ್‌ಎ) ಅಜಿತ್ ದೊಭಾಲ್ ಅವರು ಮಂಗಳವಾರ ತಡರಾತ್ರಿ ಸೀಲಾಂಪುರ ಪ್ರದೇಶಕ್ಕೆ ತೆರಳಿ ಪರಿಸ್ಥಿತಿಯನ್ನು ನಿಭಾಯಿಸಿದರು ಮತ್ತು ಹಿಂಸಾಚಾರ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದರು.

ಪೌರತ್ವ ತಿದ್ದುಪಡಿ ಕಾಯ್ದೆಯ (ಸಿಎಎ) ಪರ–ವಿರುದ್ಧದ ಪ್ರತಿಭಟನೆಯು ಸೋಮವಾರವೇ ಕೋಮು ಸಂಘರ್ಷಕ್ಕೆ ತಿರುಗಿದ ಪರಿಣಾಮವಾಗಿ 13 ಜನರು ಮೃತಪಟ್ಟಿದ್ದರೆ, 190ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT