ಭಾನುವಾರ, ಸೆಪ್ಟೆಂಬರ್ 22, 2019
27 °C
ಜುಲೈ ತಿಂಗಳಲ್ಲಿ ಶೇ 2.1ಕ್ಕೆ ಇಳಿಕೆ

ವಿದ್ಯುತ್, ಸಿಮೆಂಟ್ ಸೇರಿ ಪ್ರಮುಖ ಕೈಗಾರಿಕೆಗಳ ಆರ್ಥಿಕ ಬೆಳವಣಿಗೆ ಭಾರೀ ಕುಸಿತ

Published:
Updated:

ನವದೆಹಲಿ: ವಿದ್ಯುತ್, ಕಚ್ಚಾ ತೈಲ, ಸಿಮೆಂಟ್ ಸೇರಿದಂತೆ ಪ್ರಮುಖ 8 ಕೈಗಾರಿಕಾ ವಲಯಗಳ ಆರ್ಥಿಕ ಬೆಳವಣಿಗೆ ಪ್ರಮಾಣ ಜುಲೈನಲ್ಲಿ ಶೇ 2.1ಕ್ಕೆ ಕುಸಿದಿದೆ ಎಂದು ಸರ್ಕಾರ ಸೋಮವಾರ ಬಿಡುಗಡೆ ಮಾಡಿದ ಅಂಕಿಅಂಶ ತಿಳಿಸಿದೆ.

ಕಲ್ಲಿದ್ದಲು, ಕಚ್ಚಾ ತೈಲ, ನೈಸರ್ಗಿಕ ಅನಿಲ, ಪೆಟ್ರೋಲಿಯಂ ಉತ್ಪನ್ನಗಳು, ರಸಗೊಬ್ಬರ, ಉಕ್ಕು, ಸಿಮೆಂಟ್ ಮತ್ತು ವಿದ್ಯುತ್‌ ವಲಯಗಳ ಬೆಳವಣಿಗೆ ದರ ಕಳೆದ ವರ್ಷ ಜುಲೈನಲ್ಲಿ ಶೇ 7.3ರಷ್ಟಿತ್ತು. ಆದರೆ ಈ ವರ್ಷ ಜುಲೈನಲ್ಲಿ ಶೇ 2.1ರಷ್ಟಿದೆ ಎಂದು ಸರ್ಕಾರ ಬಿಡುಗಡೆ ಮಾಡಿರುವ ಅಂಕಿಅಂಶಗಳನ್ನು ಉಲ್ಲೇಖಿಸಿ ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಇದನ್ನೂ ಓದಿ: 6 ವರ್ಷಗಳಲ್ಲಿನ ಕನಿಷ್ಠ ಮಟ್ಟಕ್ಕೆ ತಲುಪಿದೆ ಆರ್ಥಿಕ ವೃದ್ಧಿ ದರ

ಕೈಗಾರಿಕಾ ಉತ್ಪಾದನೆ ಸೂಚ್ಯಂಕದಲ್ಲಿ (ಐಐಪಿ) ಈ ಕೈಗಾರಿಕೆಗಳ ಕೊಡುಗೆ ಶೇ 40.27ರಷ್ಟಿದೆ.

ಉಕ್ಕು, ಸಿಮೆಂಟ್ ಮತ್ತು ವಿದ್ಯುತ್ ವಲಯಗಳು ಕ್ರಮವಾಗಿ ಶೇ 6.6, ಶೇ 7.9 ಮತ್ತು ಶೇ 4.2 ಇಳಿಕೆ ಕಂಡಿವೆ. ಇವು ಕಳೆದ ವರ್ಷ ಕ್ರಮವಾಗಿ ಶೇ 6.9, ಶೇ 11.2 ಹಾಗೂ ಶೇ 6.7ರ ಬೆಳವಣಿಗೆ ಕಂಡಿದ್ದವು ಎಂದು ವರದಿ ತಿಳಿಸಿದೆ.

ಇದನ್ನೂ ಓದಿ: ಜಿಡಿಪಿ ಕುಸಿದರೆ ಉದ್ಯೋಗಕ್ಕೆ ಕುತ್ತು, ನಮ್ಮ ಆದಾಯಕ್ಕೂ ಜಿಡಿಪಿಗೂ ಏನು ಸಂಬಂಧ?

ಆದಾಗ್ಯೂ, ರಸಗೊಬ್ಬರ ಕೈಗಾರಿಕೆ ತುಸು ಸುಧಾರಣೆ ಕಂಡಿದ್ದು ಶೇ 1.5 ದಾಖಲಾಗಿದೆ. ಇದು ಕಳೆದ ವರ್ಷ ಜುಲೈನಲ್ಲಿ ಶೇ 1.3ರಷ್ಟು ದಾಖಲಾಗಿತ್ತು.

ಇದನ್ನೂ ಓದಿ: ಐದು ಲಕ್ಷ ಕೋಟಿ ಡಾಲರ್ ಆರ್ಥಿಕತೆ ಕನಸಿಗೆ ಗುಡ್ ಬೈ ಹೇಳಿ: ಸುಬ್ರಮಣಿಯನ್ ಸ್ವಾಮಿ

Post Comments (+)