ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಫೇಸ್‌ಬುಕ್‌ನಲ್ಲಿ ಪ್ರಧಾನಿ ವಿರುದ್ಧ ಟೀಕೆ: ಅಸ್ಸಾಂನಲ್ಲಿ ಉಪನ್ಯಾಸಕ ಬಂಧನ

Last Updated 29 ಫೆಬ್ರುವರಿ 2020, 15:38 IST
ಅಕ್ಷರ ಗಾತ್ರ

ಸಿಲ್ಚಾರ್‌: ಫೇಸ್‌ಬುಕ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಹಾಕಿದ್ದ ಅಸ್ಸಾಂನ ಸಿಲ್ಚಾರ್‌ಕಾಲೇಜಿನ ಅತಿಥಿ ಉಪನ್ಯಾಸಕ ಸೌರವ್‌ದೀಪ್‌ ಸೇನ್‌ಗುಪ್ತಾ ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ.

ಗುರುಚರಣ್‌ ಕಾಲೇಜಿನ ಭೌತಶಾಸ್ತ್ರ ವಿಭಾಗದಲ್ಲಿ ಅತಿಥಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಇವರನ್ನು, ವಿದ್ಯಾರ್ಥಿಯೊಬ್ಬ ನೀಡಿದ ದೂರು ಆಧರಿಸಿ ಶುಕ್ರವಾರ ರಾತ್ರಿ ಬಂಧಿಸಲಾಗಿದೆ.

ಸೌರವ್‌ದೀಪ್‌ ತಮ್ಮ ಫೇಸ್‌ಬುಕ್‌ ಪೋಸ್ಟ್‌ಗಳಲ್ಲಿ ಸಮುದಾಯವೊಂದನ್ನು ಗುರಿಯಾಗಿಸಿದ್ದರು ಎಂಬ ಆರೋಪವೂ ಇದೆ. ಅವರನ್ನು ಸೇವೆಯಿಂದ ತೆಗೆಯಲು ಆಗ್ರಹಿಸಿ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಭಟನೆಯನ್ನೂ ನಡೆಸಿದ್ದರು. ಅವಹೇಳನಕಾರಿ ಪೋಸ್ಟ್ ಹಾಕಿದಕ್ಕಾಗಿ ಹಲವು ಬಾರಿ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆಯಾಚಿಸಿರುವುದಾಗಿ ಆತನ ಕುಟುಂಬದವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT