ಗುಜರಾತ್‌ನ 2002ರ ಹಿಂಸಾಚಾರ ಪ್ರಕರಣ: ಮೋದಿ ವಿರುದ್ಧ ಮತ್ತೆ ವಿಚಾರಣೆ

7

ಗುಜರಾತ್‌ನ 2002ರ ಹಿಂಸಾಚಾರ ಪ್ರಕರಣ: ಮೋದಿ ವಿರುದ್ಧ ಮತ್ತೆ ವಿಚಾರಣೆ

Published:
Updated:

ನವದೆಹಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಹಿಂಸಾಚಾರ ಪ್ರಕರಣದಲ್ಲಿ ನರೇಂದ್ರ ಮೋದಿ ಅವರನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ) ದೋಷಮುಕ್ತಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ನವೆಂಬರ್‌ 19ಕ್ಕೆ ನಡೆಸಲಿದೆ.

 ಮಾಜಿ ಸಂಸದ, ದಿವಂಗತ ಎಹ್ಸಾನ್‌ ಜಾಫ್ರಿ ಅವರ ಪತ್ನಿ ಝಾಕಿಯಾ ಜಾಫ್ರಿ ಈ ಅರ್ಜಿ ಸಲ್ಲಿಸಿದ್ದಾರೆ.

2002ರಲ್ಲಿ ಹಿಂಸಾಚಾರ ನಡೆದಾಗ ನರೇಂದ್ರ ಮೋದಿ ಗುಜರಾತ್‌ ಮುಖ್ಯಮಂತ್ರಿಯಾಗಿದ್ದರು. ಈ ಮೊದಲು ಎಸ್‌ಐಟಿ ನಿರ್ಧಾರ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಗುಜರಾತ್‌ ಹೈಕೋರ್ಟ್‌ 2017ರ ಅಕ್ಟೋಬರ್‌ 5ರಂದು ತಿರಸ್ಕರಿಸಿತ್ತು. ಹೈಕೋರ್ಟ್‌ನ ಈ ಆದೇಶವನ್ನು ಸಹ ಜಾಫ್ರಿ ಅವರು ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಬರಹ ಇಷ್ಟವಾಯಿತೆ?

  • 1

    Happy
  • 1

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !