ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್-19 ಸೋಂಕಿತ ಶಾಸಕನ ಭೇಟಿ: ಗುಜರಾತ್ ಸಿಎಂ ವಿಜಯ್ ರೂಪಾನಿ ಕ್ವಾರಂಟೈನ್‌

Last Updated 15 ಏಪ್ರಿಲ್ 2020, 11:39 IST
ಅಕ್ಷರ ಗಾತ್ರ

ನವದೆಹಲಿ: ಕೋವಿಡ್-19 ಪರೀಕ್ಷೆಯಲ್ಲಿ ಕಾಂಗ್ರೆಸ್ ಶಾಸಕರೊಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರನ್ನು ಭೇಟಿ ಮಾಡಿದ್ದ ಗುಜರಾತ್ ಮುಖ್ಯಮಂತ್ರಿ ವಿಜಯ್​​​​​ ರೂಪಾನಿ ಸ್ವಯಂ ಕ್ವಾರಂಟೈನ್‌ನಲ್ಲಿರಲು ತೀರ್ಮಾನಿಸಿದ್ದಾರೆ ಎಂದು ಸುದ್ದಿಸಂಸ್ಥೆ ಪಿಟಿಐ ವರದಿ ಮಾಡಿದೆ.

ವಿಜಯ್ ರೂಪಾನಿ ಅವರ ನೇತೃತ್ವದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಕಾಂಗ್ರೆಸ್ ಶಾಸಕ ಇಮ್ರಾನ್ ಖೇಡವಾಲರು ಭಾಗಿಯಾಗಿದ್ದರು. ಅವರಿಗೆ ಕೋವಿಡ್-19 ಇರುವುದು ದೃಢಪಟ್ಟಿತ್ತು. ಇದರಿಂದಾಗಿ ವಿಜಯ್ ರೂಪಾನಿ ಅವರು ಒಂದು ವಾರಗಳ ಕಾಲ ಯಾರನ್ನೂ ಭೇಟಿಯಾಗುವುದಿಲ್ಲ ಎಂದು ಮುಖ್ಯಮಂತ್ರಿ ಕಚೇರಿ ತಿಳಿಸಿದೆ.

ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಸದೃಢ ಮತ್ತು ಸುರಕ್ಷಿತವಾಗಿದ್ದಾರೆ. ವೈದ್ಯಕೀಯ ತಜ್ಞರಾದ ಡಾ. ಅತುಲ್ ಪಟೇಲ್ ಮತ್ತು ಡಾ. ಆರ್.ಕೆ. ಪಟೇಲ್ ಅವರು ರೂಪಾನಿ ಅವರನ್ನು ಪರೀಕ್ಷಿಸಿ, ಸಿಎಂಗೆ ಯಾವುದೇ ರೋಗ ಲಕ್ಷಣಗಳಿಲ್ಲ ಎಂದು ಖಚಿತಪಡಿಸಿದ್ದಾರೆ. ಆದರೆ ಸುರಕ್ಷತಾ ಕ್ರಮಗಳ ಪ್ರಕಾರ, ಅವರ ನಿವಾಸಕ್ಕೆ ಹೊರಗಿನವರಿಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಸಿಎಂ ಕಾರ್ಯದರ್ಶಿ ಅಶ್ವನಿ ಕುಮಾರ್ ಅವರು ಸುದ್ದಿಸಂಸ್ಥೆ ಎಎನ್‌ಐಗೆ ತಿಳಿಸಿದ್ದಾರೆ.

ಈ ವೇಳೆ ರೂಪಾನಿ ಅವರು ವಿಡಿಯೊ ಕಾನ್ಫರೆನ್ಸ್ ಮತ್ತು ಫೋನ್ ಕರೆ ಮೂಲಕ ರಾಜ್ಯದ ಆಡಳಿತವನ್ನು ಮುನ್ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.

ಅಹಮದಾಬಾದಿನ ಖಾದಿಯ - ಜಮಲಾಪುರ ಕ್ಷೇತ್ರವನ್ನು ಪ್ರತಿನಿಧಿಸುವ ಇಮ್ರಾನ್ ಖೇಡವಾಲ ಅವರು, ಮಂಗಳವಾರ ಮುಂಜಾನೆ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಕರೆ ನೀಡಿದ್ದ ಸಭೆಯಲ್ಲಿ ಪಾಲ್ಗೊಂಡಿದ್ದರು ಮತ್ತು ಸಂಜೆ ನಡೆದ ಕೋವಿಡ್-19 ಪರೀಕ್ಷೆಯಲ್ಲಿ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಸಭೆಯಲ್ಲಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಮತ್ತು ಗೃಹ ಸಚಿವ ಪ್ರದೀಪ್ ಸಿನ್ಹಾ ಜಡೇಜಾ ಭಾಗವಹಿಸಿದ್ದರು.

ಗುಜರಾತ್‌ನಲ್ಲಿ ಇನ್ನೂ ಇಬ್ಬರು ಕೋವಿಡ್ -19ಗೆ ಬಲಿಯಾಗಿದ್ದು, ರಾಜ್ಯದಲ್ಲಿ ಸಾವಿನ ಸಂಖ್ಯೆ 30ಕ್ಕೆ ಏರಿಕೆಯಾಗಿದೆ. ಬಲಿಯಾದವರಲ್ಲಿ ವಡೋದರಾ ಮೂಲದ 14 ವರ್ಷದ ಬಾಲಕಿ ಮತ್ತು ಸೂರತ್‌ನ 45 ವರ್ಷದ ಮಹಿಳೆ ಸೇರಿದ್ದಾರೆ ಎಂದು ರಾಜ್ಯ ಆರೋಗ್ಯ ಇಲಾಖೆ ಬುಧವಾರ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT