ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾತ್ಮ ಗಾಂಧಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ?:ಗುಜರಾತ್ ಶಾಲಾ ಪ್ರಶ್ನೆಪತ್ರಿಕೆ

Last Updated 13 ಅಕ್ಟೋಬರ್ 2019, 16:41 IST
ಅಕ್ಷರ ಗಾತ್ರ

ಅಹಮದಾಬಾದ್: ಮಹಾತ್ಮ ಗಾಂಧಿ ಆತ್ಮಹತ್ಯೆ ಮಾಡಿಕೊಂಡಿದ್ದು ಹೇಗೆ?- ಗುಜರಾತಿನ 9ನೇ ತರಗತಿಯ ಇಂಟರ್ನಲ್ ಅಸೆಸ್‌ಮೆಂಟ್ ಪರೀಕ್ಷೆಯಲ್ಲಿ ಕೇಳಲಾದ ಪ್ರಶ್ನೆ ಇದು. ಸುಫಲಾಂ ಶಾಲಾ ವಿಕಾಸ್ ಸಂಕುಲ್ ಸಂಸ್ಥೆಯ ಅಧೀನದ ಶಾಲೆಯ ಪ್ರಶ್ನೆ ಪತ್ರಿಕೆಯಲ್ಲಿ ಈ ರೀತಿಯ ಪ್ರಶ್ನೆ ಕೇಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಸುಫಲಾಂ ಶಾಲಾ ವಿಕಾಸ್ ಸಂಕುಲ್ ಎಂಬ ಸಂಸ್ಥೆ ಸ್ವ-ಹಣಕಾಸು ಶಾಲೆ ಮತ್ತು ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದು ಸರ್ಕಾರದಿಂದ ಅನುದಾನವನ್ನೂ ಪಡೆಯುತ್ತಿದೆ.

ಇದೇ ಶಾಲೆಯ 12ನೇ ತರಗತಿಯ ಪ್ರಶ್ನೆ ಪತ್ರಿಕೆಯಲ್ಲಿ ಕೇಳಲಾದ ಪ್ರಶ್ನೆ ಹೀಗಿದೆ- ನಿಮ್ಮ ಪ್ರದೇಶದಲ್ಲಿ ಮದ್ಯ ಮಾರಾಟ ಹೆಚ್ಚುತ್ತಿರುವ ಬಗ್ಗೆ ಮತ್ತು ಅಕ್ರಮ ಮಾರಾಟಗಾರ ಉಪದ್ರವ ಬಗ್ಗೆ ಜಿಲ್ಲಾ ಪೊಲೀಸ್ ಅಧಿಕಾರಿಗೆ ಪತ್ರ ಬರೆಯಿರಿ ಎಂದಿದೆ.

ಶನಿವಾರ ನಡೆದ ಪರೀಕ್ಷೆಯಲ್ಲಿ ಈ ಪ್ರಶ್ನೆ ಕೇಳಲಾಗಿದ್ದು ಇವೆರಡೂ ಆಕ್ಷೇಪಾರ್ಹವಾದುದು. ಈ ಬಗ್ಗೆ ನಾವು ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುತ್ತೇವೆಎಂದು ಗಾಂಧೀನಗರದ ಜಿಲ್ಲಾ ಶಿಕ್ಷಣಾಧಿಕಾರಿ ಭರತ್ ವಧೇರ್ ಹೇಳಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT