ಗುಜರಾತ್: ಗ್ಯಾಸ್ ಕಂಪನಿಯಲ್ಲಿ ಸ್ಫೋಟ, ಸ್ಥಳದಲ್ಲೇ ಐದು ಮಂದಿ ಸಾವು

ವಡೋದರ: ಕೈಗಾರಿಕೆ ಮತ್ತು ವೈದ್ಯಕೀಯ ಬಳಕೆಗಾಗಿ ಗ್ಯಾಸ್ ಸಿದ್ಧಪಡಿಸುವ ಕಂಪನಿಯಲ್ಲಿ ಸ್ಫೋಟ ಸಂಭವಿಸಿ 5 ಮಂದಿ ಮೃತಪಟ್ಟಿದ್ದು, ಹಲವು ಮಂದಿ ಗಾಯಗೊಂಡಿದ್ದಾರೆ.
ಗುಜರಾತ್ನ ವಡೋದರದ ಪಡರಾ ಪ್ರದೇಶದಲ್ಲಿರುವ ಗ್ಯಾಸ್ ಕಂಪನಿಯಲ್ಲಿ ಶನಿವಾರ ಬೆಳಿಗ್ಗೆ ಸ್ಫೋಟ ಸಂಭವಿಸಿದೆ. ಏಮ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನಲ್ಲಿ 11 ಗಂಟೆ ಸುಮಾರಿಗೆ ಸ್ಫೋಟ ಆಗಿರುವುದಾಗಿ ವಡು ಪೊಲೀಸ್ ಠಾಣೆಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಸ್ಥಳದಲ್ಲಿಯೇ ಐವರು ಸಾವಿಗೀಡಾಗಿದ್ದಾರೆ. ಗಾಯಗೊಂಡವರನ್ನು ಸಮೀಪದ ಆಸ್ಪತ್ರೆಗೆ ಸಾಗಿಸಲಾಗಿದೆ. ಅಗ್ನಿ ಶಾಮಕ ಸಿಬ್ಬಂದಿ ಸ್ಥಳದಲ್ಲಿದ್ದು ಪರಿಸ್ಥಿತಿ ನಿಯಂತ್ರಿಸುತ್ತಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.