ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ಕ್ರಮಕ್ಕೆ ಗಂಭೀರ್‌ ಆಗ್ರಹ

ಬುಧವಾರ, ಜೂನ್ 19, 2019
29 °C
ಬಿಜೆಪಿಯ ಕೆಲವು ನಾಯಕರ ಅಸಮಾಧಾನ

ಮುಸ್ಲಿಂ ವ್ಯಕ್ತಿ ಮೇಲೆ ಹಲ್ಲೆ: ಕ್ರಮಕ್ಕೆ ಗಂಭೀರ್‌ ಆಗ್ರಹ

Published:
Updated:
Prajavani

ನವದೆಹಲಿ: ಗುರುಗ್ರಾಮದಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿದ್ದನ್ನು ವಿಷಾದನೀಯ ಎಂದು ಹೇಳಿರುವ ದೆಹಲಿ ಪೂರ್ವ ಕ್ಷೇತ್ರದ ಬಿಜೆಪಿ ಸಂಸದ ಗೌತಮ್‌ ಗಂಭೀರ್‌, ಈ ಪ್ರಕರಣದ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಹೇಳಿದ್ದಾರೆ.

ವಿರೋಧ ಪಕ್ಷಗಳು ನೀಡುವ ಹೇಳಿಕೆಯಂತೆ ಗಂಭೀರ್‌ ಹೇಳಿದ್ದಾರೆ ಎಂದು ಬಿಜೆಪಿಯ ಕೆಲವು ನಾಯಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೊಹಮ್ಮದ್‌ ಬಕರ್‌ ಆಲಂ (25) ಎಂಬಾತನ ಮೇಲೆ ಮೇ 25 ರಂದು ಹಲ್ಲೆ ನಡೆಸಲಾಗಿತ್ತು. ತಲೆಗೆ ಹಾಕಿಕೊಂಡಿದ್ದ ಮುಸ್ಲಿಂರ ಸಾಂಪ್ರದಾಯಿಕ ಟೋಪಿ ತೆಗೆದು ಜೈ ಶ್ರೀರಾಂ ಎಂದು ಘೋಷಣೆ ಕೂಗುವಂತೆ ಆಲಂ ಅವರನ್ನು ಅಪರಿಚಿತ ನಾಲ್ವರು ಒತ್ತಾಯಿಸಿದ್ದಾರೆ. ಇದನ್ನು ನಿರಾಕರಿಸಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಲಾಗಿದೆ. 

‘ಗಂಭೀರ್‌ ಅವರು ಈಗ ಕ್ರಿಕೆಟ್‌ ಆಟಗಾರರಲ್ಲ ಎಂಬುದನ್ನು ತಿಳಿದುಕೊಳ್ಳಬೇಕು. ರಾಜಕೀಯ ದೃಷ್ಟಿಕೋನದಿಂದ ಹೇಳಿಕೆ ನೀಡಬೇಕು. ಇಂಥ ಘಟನೆಗಳನ್ನು ಯಾರೂ ಇಷ್ಟಪಡುವುದಿಲ್ಲ. ಆದರೆ, ಹರಿಯಾಣದಲ್ಲಿ ನಡೆದಿರುವ ಈ ಘಟನೆ ಬಗ್ಗೆ ಹೇಳಿಕೆ ನೀಡುವುದರಿಂದ ಪ್ರಯೋಜನವೇನಿದೆ. ವಿರೋಧಪಕ್ಷಗಳು ಬಿಜೆಪಿ ವಿರುದ್ಧ ಇಂಥ ಹೇಳಿಕೆಗಳನ್ನು ಬಳಸಿಕೊಳ್ಳಬಹುದು’ ಎಂದು ಹಿರಿಯ ನಾಯಕರೊಬ್ಬರು ಹೇಳಿದ್ದಾರೆ. 

‘ಪ್ರಧಾನಿ ನರೇಂದ್ರ ಮೋದಿ ಅವರ ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌ ಎಂಬ ಮಂತ್ರದಿಂದ ಜಾತ್ಯತೀತೆಯ ಬಗ್ಗೆ ನನ್ನ ಆಲೋಚನೆಗಳು ಹೊರಹೊಮ್ಮಿವೆ. ಗುರುಗ್ರಾಮ ಘಟನೆಗೆ ಮಾತ್ರ ಇದು ಸೀಮಿತವಲ್ಲ. ಜಾತಿ, ಧರ್ಮದ ಆಧಾರದ ಮೇಲೆ ಯಾವುದೇ ದಬ್ಬಾಳಿಕೆ ನಡೆದರೂ ವಿಷಾದನೀಯ. ಸಹಿಷ್ಣುತೆ ಮತ್ತು ಅಂತರ್ಗತ ಬೆಳವಣಿಗೆ ಭಾರತದ ಕಲ್ಪನೆಯನ್ನು ಆಧರಿಸಿದೆ’ ಎಂದು ಗಂಭೀರ್‌ ಮತ್ತೊಂದು ಟ್ವೀಟ್‌ನಲ್ಲಿ ತಮ್ಮ ಹೇಳಿಕೆ ಸಮರ್ಥಿಸಿಕೊಂಡಿದ್ದಾರೆ.

ವಿರಾಟ್ ಕೊಹ್ಲಿ ನಾಯಕತ್ವದ ಭಾರತ ಕ್ರಿಕೆಟ್‌ ತಂಡ ಕಪ್ ಗೆಲ್ಲುತ್ತಾ? ಐಸಿಸಿ ವಿಶ್ವಕಪ್ 2019 ಯಾರು ಗೆಲ್ಲುತ್ತಾರೆ? ಕೋಟ್ಯಂತರ ಕ್ರಿಕೆಟ್ ಪ್ರೇಮಿಗಳ ನಿರೀಕ್ಷೆಗೆ ಉತ್ತರ ಸಿಗುವ ಕಾಲ ಬಂದಿದೆ. ವಿಶ್ವಕಪ್ ಕ್ರಿಕೆಟ್‌ನ ಸ್ಕೋರ್ ಅಪ್‌ಡೇಟ್ಸ್‌, ಮ್ಯಾಚ್‌ಗಳ ವರದಿ, ವಿಶ್ವಕಪ್ ಕ್ರಿಕೆಟ್ ಹೆಜ್ಜೆ ಗುರುತು, ಆಟಗಾರರ ಸಂದರ್ಶನ, ವೇಳಾಪಟ್ಟಿ ತಿಳಿದುಕೊಳ್ಳಲು www.prajavani.net ಜಾಲತಾಣಕ್ಕೆ ಭೇಟಿ ನೀಡಿ. ಕ್ರೀಡಾಪ್ರೇಮಿಗಳ ನೆಚ್ಚಿನ ಆಯ್ಕೆ ‘ಪ್ರಜಾವಾಣಿ’. ಇದು ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 7

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !