ಹಂದ್ವಾರ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ, ಐವರು ಭದ್ರತಾ ಸಿಬ್ಬಂದಿ ಹುತಾತ್ಮ

ಶುಕ್ರವಾರ, ಮಾರ್ಚ್ 22, 2019
31 °C
ಮೂರು ದಿನ ನಡೆದ ಕಾರ್ಯಾಚರಣೆ

ಹಂದ್ವಾರ ಎನ್‌ಕೌಂಟರ್‌: ಇಬ್ಬರು ಉಗ್ರರ ಹತ್ಯೆ, ಐವರು ಭದ್ರತಾ ಸಿಬ್ಬಂದಿ ಹುತಾತ್ಮ

Published:
Updated:

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ.

ಉಗ್ರರ ವಿರುದ್ಧದ ಕಾರ್ಯಾಚರಣೆ ಮುಂದುವರಿದಿದೆ. ಮೂರುದಿನಗಳಿಂದ ನಡೆಯುತ್ತಿರುವ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಐವರು ಯೋಧರು ಹುತಾತ್ಮರಾಗಿದ್ದಾರೆ.

ಹಂದ್ವಾರ ಎನ್‌ಕೌಂಟರ್‌ ಬಹುತೇಕ ಪೂರ್ಣಗೊಂಡಿದೆ. ಅಂತಿಮ ಶೋಧ ನಡೆಯುತ್ತಿದೆ. ಇಬ್ಬರು ಉಗ್ರರ ಮೃತದೇಹಗಳನ್ನು ವಶಕ್ಕೆ ಪಡೆಯಲಾಗಿದ್ದು, ಅವರ ಗುರುತು ಪತ್ತೆ ಮಾಡಲಾಗುತ್ತಿದೆ. ತಾರಿಣಿ ಪ್ರದೇಶ ಹೆಚ್ಚು ನಾಗರಿಕ ವಸತಿಯಿಂದ ಕೂಡಿದೆ. ಇಲ್ಲಿ ನಡೆದ ಘಟನೆಯಲ್ಲಿ ಸಿಆರ್‌ಪಿಎಫ್‌ನ ಮೂವರು ಯೋಧರು ಹಾಗೂ ಜಮ್ಮು ಮತ್ತು ಕಾಶ್ಮೀರದ ಇಬ್ಬರು ಪೊಲೀಸರು ಹುತಾತ್ಮರಾಗಿದ್ದಾರೆ ಎಂದು ಕಾಶ್ಮೀರ ಐಜಿಪಿ ಎಸ್‌ಪಿ ಪಾಣಿ ತಿಳಿಸಿದ್ದಾರೆ.

ಪುಲ್ವಾಮದಲ್ಲಿ ಉಗ್ರರು ನಡೆಸಿದ ಬಾಂಬ್‌ ದಾಳಿಯ ಬಳಿಕ ಭಾರತೀಯ ವಾಯುಪಡೆ ‘ಏರ್‌ ಸ್ಟ್ರೈಕ್‌’ ನಡೆಸಿ ಗಡಿಯಾಚೆಗೆ ಪಾಕಿಸ್ತಾನದ ನೆಲದಲ್ಲಿ ಜೈಷ್ ಉಗ್ರರ ನೆಲೆಯನ್ನು ಧ್ವಂಸಗೊಳಿಸಿದೆ. ಇದಾದ ಬಳಿಕ, ಬಾರತದತ್ತ ಬರುತ್ತಿದ್ದ ಪಾಕಿಸ್ತಾನದ ಎಫ್‌–16 ಯುದ್ಧ ವಿಮಾನವನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.ಈ ಎಲ್ಲಾ ಬೆಳವಣಿಗೆಗಳ ನಡುವೆಯೂ  ಗಡಿಯಲ್ಲಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುತ್ತಲೇ ಇದೆ. ಉಗ್ರರು ನಾಗರಿಕರ ನಿವಾಸಗಳ ಮೇಲೆ ದಾಳಿ ನಡೆಸುತ್ತಲೇ ಇದ್ದಾರೆ. ಇದಕ್ಕೆ ಭಾರತೀಯ ಸೇನೆ ಪ್ರತ್ಯುತ್ತರ ನೀಡುತ್ತಲೇ ಇದೆ.

ಇದನ್ನೂ ಓದಿ... ನಿಲ್ಲದ ಪಾಕ್‌ ತಂಟೆ: ನಿರಂತರ ಶೆಲ್‌ ದಾಳಿಗೆ ತಾಯಿ–ಮಕ್ಕಳು ಸೇರಿ ಮೂರು ಬಲಿ

ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘಿಸಿ ಜಮ್ಮು ಮತ್ತು ಕಾಶ್ಮೀರದ ರಜೋರಿಯಲ್ಲಿ ಶನಿವಾರ ನಡೆಸಿದ ಶೆಲ್‌ ದಾಳಿಗೆ ಮನೆ ಛಿದ್ರವಾಗಿರುವುದು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 1

  Sad
 • 0

  Frustrated
 • 4

  Angry

Comments:

0 comments

Write the first review for this !