ಮಂಗಳವಾರ, ಫೆಬ್ರವರಿ 18, 2020
29 °C

ದೇಶದ್ರೋಹ ಪ್ರಕರಣ: ಹಾರ್ದಿಕ್‌ ಪಟೇಲ್‌ ಮತ್ತೆ ಬಂಧನ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ಅಹಮದಾಬಾದ್‌: ದೇಶದ್ರೋಹ ಪ್ರಕರಣದಲ್ಲಿ ಜೈಲುಶಿಕ್ಷೆಗೊಳಗಾಗಿ ಜಾಮೀನಿನ ಮೇಲೆ ಹೊರಬಂದ ಕಾಂಗ್ರೆಸ್‌ ನಾಯಕ ಹಾರ್ದಿಕ್‌ ಪಟೇಲ್‌ ಅವರನ್ನು ತಕ್ಷಣವೇ ಗಾಂಧಿನಗರ ಜಿಲ್ಲಾ ಪೊಲೀಸರು ಬಂಧಿಸಿದ್ದಾರೆ. 

2015ರಲ್ಲಿ ದಾಖಲಾಗಿದ್ದ ದೇಶದ್ರೋಹ ಪ್ರಕರಣದಲ್ಲಿ ವಿಚಾರಣಾ ನ್ಯಾಯಾಲಯದೆದುರು ವಿಚಾರಣೆಗೆ ಹಾಜರಾಗದ ಕಾರಣ ಜ.18ರಂದು ಹಾರ್ದಿಕ್‌ ಅವರನ್ನು ಬಂಧಿಸಿ ಸಾಬರಮತಿ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿತ್ತು. ಬುಧವಾರ ಅಹಮದಾಬಾದ್‌ನ ಸ್ಥಳೀಯ ನ್ಯಾಯಾಲಯವೊಂದು ಇವರಿಗೆ ಜಾಮೀನು ನೀಡಿತ್ತು. ಗುರುವಾರ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ, ಪೊಲೀಸ್‌ ಅನುಮತಿ ಇಲ್ಲದೆ ರ್‍ಯಾಲಿ ನಡೆಸಿದ ಪ್ರಕರಣದಲ್ಲಿ ಹಾರ್ದಿಕ್‌ ಅನ್ನು ಬಂಧಿಸಲಾಗಿದೆ.

‘2017ರಲ್ಲಿ ನಡೆದ ಗುಜರಾತ್‌ ವಿಧಾನಸಭೆ ಚುನಾವಣೆಗೂ ಮುನ್ನ ಮಾನ್ಸಾ ನಗರದಲ್ಲಿ ಪೊಲೀಸ್‌ ಅನುಮತಿ ಇಲ್ಲದೆ ಹಾರ್ದಿಕ್‌ ಪಟೇಲ್‌ ರ್‍ಯಾಲಿ ನಡೆಸಿದ್ದರು. ಆಗ ಎಫ್‌ಐಆರ್‌ ದಾಖಲಿಸಲಾಗಿತ್ತು. ಈ ಪ್ರಕರಣದಲ್ಲಿ ಇದೀಗ ಅವರನ್ನು ಬಂಧಿಸಲಾಗಿದೆ’ ಎಂದು ಮಾನ್ಸಾದ ಪೊಲೀಸ್‌ ಸಬ್‌ಇನ್‌ಸ್ಪೆಕ್ಟರ್‌ ಎಸ್.ಎಸ್.ಪವಾರ್‌ ತಿಳಿಸಿದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು