ಬುಧವಾರ, ಏಪ್ರಿಲ್ 8, 2020
19 °C

ದೇಶದ್ರೋಹ ಪ್ರಕರಣ: ಹಾರ್ದಿಕ್‌ ಪಟೇಲ್‌ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಅಹಮದಾಬಾದ್‌: ದೇಶದ್ರೋಹ ಪ್ರಕರಣಕ್ಕೆ ಸಂಬಂಧಿಸಿ ಕಾಂಗ್ರೆಸ್‌ ಮುಖಂಡ ಹಾರ್ದಿಕ್‌ ಪಟೇಲ್‌ ಅವರನ್ನು ಅಹಮದಾಬಾದ್‌ ಜಿಲ್ಲೆಯ ವೀರಂಗಾಂನಲ್ಲಿ ಪೊಲೀಸರು ಶನಿವಾರ ಬಂಧಿಸಿದ್ದಾರೆ.

ವಿಚಾರಣೆಗೆ ಹಾಜರಾಗದ ಕಾರಣ ಅವರ ಬಂಧನಕ್ಕೆ ಇಲ್ಲಿನ ಸೆಷನ್ಸ್‌ ಕೋರ್ಟ್‌ ವಾರಂಟ್‌ ಜಾರಿ ಮಾಡಿದ ಕೆಲವೇ ಗಂಟೆಯಲ್ಲಿ ಹಾರ್ದಿಕ್‌ ಅವರನ್ನು ಬಂಧಿಸಲಾಗಿದೆ.

ಪಾಟೀದಾರ್‌ ಸಮುದಾಯಕ್ಕೆ ಮೀಸಲಾತಿ ನೀಡುವಂತೆ ಒತ್ತಾಯಿಸಿ 2015ರಲ್ಲಿ ಹಾರ್ದಿಕ್‌ ನೇತೃತ್ವದಲ್ಲಿ ನಡೆದಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಆಗ ಇವರ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು