ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾರ್ದಿಕ್‌ ಪಟೇಲ್‌ ಕಾಂಗ್ರೆಸ್‌ಗೆ ಸೇರ್ಪಡೆ

ಗುಜರಾತಿನ ಜಮ್ನಾಗರ್‌ ಕ್ಷೇತ್ರದ ಆಕಾಂಕ್ಷಿ
Last Updated 12 ಮಾರ್ಚ್ 2019, 12:27 IST
ಅಕ್ಷರ ಗಾತ್ರ

ಅಹಮದಾಬಾದ್: ಪಾಟಿದಾರ್‌ ಸಮುದಾಯದ ಮೀಸಲಾತಿ ಹೋರಾಟಗಾರ ಹಾರ್ದಿಕ್‌ ಪಟೇಲ್‌ ಮಂಗಳವಾರ ಕಾಂಗ್ರೆಸ್‌ಗೆ ಸೇರ್ಪಡೆಯಾಗಿದ್ದಾರೆ.

ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದ ಕಾಂಗ್ರೆಸ್‌ ಕಾರ್ಯಕರ್ತರ ಸಮಿತಿ ಸಭೆಯಲ್ಲಿ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್‌ ಸೇರಿದ್ದಾರೆ.

ಮಹಾತ್ಮಾ ಗಾಂಧಿ, ಇದೇ ದಿನ ಬ್ರಿಟಿಷರ ವಿರುದ್ಧ ದಂಡಿ ಸತ್ಯಾಗ್ರಹವನ್ನು ಆರಂಭಿಸಿದ್ದರು. ಈ ಹಿಂದೆ ಇದೇ ಪಕ್ಷದಲ್ಲಿದ್ದ ಸುಭಾಷ್ ಚಂದ್ರ ಬೋಸ್, ಪಂಡಿತ್ ನೆಹರು, ಸರದಾರ್ ಪಟೇಲ್, ಇಂದಿರಾ ಗಾಂಧಿ, ರಾಜೀವ್‌ಗಾಂಧಿ ರಾಷ್ಟ್ರದ ಉದ್ಧಾರಕ್ಕಾಗಿ ಶ್ರಮಿಸಿದ್ದರು ಎಂದು ಈ ಸಂದರ್ಭದಲ್ಲಿ ನೆನಪಿಸಿಕೊಂಡರು.

ರಾಷ್ಟ್ರದ ಜನತೆಯ ಬದುಕಿಗಾಗಿ ಯಾವುದೇ ಸಮಸ್ಯೆಗಳನ್ನು ಎದುರಿಸಲು ಸಿದ್ಧವಾಗಿರುವ ಕಾಂಗ್ರೆಸ್, ಹೇಗೆ ಸ್ವಜನಪಕ್ಷಪಾತ ಪಕ್ಷ ಎನಿಸಿಕೊಳ್ಳುತ್ತದೆ? ಎಂದು ಇದೇ ಸಂದರ್ಭದಲ್ಲಿ ಪ್ರಶ್ನಿಸಿದ್ದಾರೆ.

ಹಾರ್ದಿಕ್ ಲೋಕಸಭಾ ಚುನಾವಣೆಯಲ್ಲಿ ಗುಜರಾತಿನ ಜಮ್ನಾಗರ್‌ ಕ್ಷೇತ್ರದಿಂದ ಸ್ಪರ್ಧಿಸುವ ಆಕಾಂಕ್ಷೆ ಹೊಂದಿದ್ದು , ಇಲ್ಲಿ ಸದ್ಯ ಬಿಜೆಪಿಯ ಪೂನಂಬೇನ್‌ ಮದಾಮ್ ಪ್ರತಿನಿಧಿಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT