ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್–19: ‘ದೇಶದ 80 ಜಿಲ್ಲೆಗಳಲ್ಲಿ ಕಳೆದ 7 ದಿನಗಳಿಂದ ಒಂದೇಒಂದು ಪ್ರಕರಣವಿಲ್ಲ'

Last Updated 29 ಏಪ್ರಿಲ್ 2020, 1:23 IST
ಅಕ್ಷರ ಗಾತ್ರ

ನವದೆಹಲಿ: ದೇಶದಾದ್ಯಂತ ಒಟ್ಟು 80 ಜಿಲ್ಲೆಗಳಲ್ಲಿ ಕಳೆದ ಏಳು ದಿನಗಳಿಂದ ಕೋವಿಡ್‌-19 ಸೋಂಕು ಪ್ರಕರಣಗಳು ವರದಿಯಾಗಿಲ್ಲ ಎಂದು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ತಿಳಿಸಿದ್ದಾರೆ.

ಸಚಿವರು, ಜೈವಿಕ ತಂತ್ರಜ್ಞಾನ ವಿಭಾಗದ ನಿರ್ದೇಶಕರು, ಮುಖ್ಯಸ್ಥರು ಮತ್ತು ಅದರ 18 ಸ್ವಾಯತ್ತ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಸಾರ್ವಜನಿಕ ವಲಯದ ಸಂಸ್ಥೆಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪರಿಶೀಲನಾ ಸಭೆ ನಡೆಸಿದರು.

ಈ ವೇಳೆ ಮಾತನಾಡಿದ ಅವರು, ‘ದೇಶದ 300ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇದುವರೆಗೆ ಸೋಂಕು ಪ್ರಕರಣಗಳು ವರದಿಯಾಗಿಲ್ಲ, ಆದರೆ, ಹೆಚ್ಚು ಪ್ರಕರಣಗಳು ವರದಿಯಾದ 129 ಜಿಲ್ಲೆಗಳನ್ನು ಹಾಟ್‌ಸ್ಪಾಟ್‌ಗಳೆಂದು ಘೋಷಿಸಲಾಗಿದೆ. ಈ ಜಿಲ್ಲೆಗಳತ್ತ ಸರ್ಕಾರ ಹೆಚ್ಚಿನ ಗಮನ ಹರಿಸಿದ್ದು, ಸೋಂಕು ಹರಡದಂತೆ ಕ್ರಮ ಕೈಗೊಳ್ಳಲಾಗಿದೆ’ ಎಂದಿದ್ದಾರೆ.

‘ಮೇಕ್‌ ಇನ್‌ ಇಂಡಿಯಾ’ ಕಾರ್ಯಕ್ರಮದ ಅಡಿಯಲ್ಲಿ ವೈರಸ್‌ ವಿರುದ್ಧದ ಪ್ರತಿಕಾಯ ಕಿಟ್‌ಗಳ ಅಭಿವೃದ್ಧಿ ಕಿಟ್‌ಗಳು ಮತ್ತು ಕೋವಿಡ್‌–19ಗೆ ತ್ವರಿತವಾಗಿ ಲಸಿಕೆ ಕಂಡುಹಿಡಿಯುವಂತೆ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ.

‘ದೇಶದಾದ್ಯಂತ ಒಟ್ಟು 80 ಜಿಲ್ಲೆಗಳಲ್ಲಿ 7 ದಿನಗಳಿಂದ ಹೊಸ ಪ್ರಕರಣಗಳು ವರದಿಯಾಗಿಲ್ಲ, 47 ಜಿಲ್ಲೆಗಳಲ್ಲಿ ಕಳೆದ 14 ದಿನಗಳಿಂದ ಹೊಸ ಪ್ರಕರಣಗಳಿಲ್ಲ. ಅದೇರೀತಿ 21 ದಿನಗಳಿಂದ 39 ಜಿಲ್ಲೆಗಳಲ್ಲಿ ಪ್ರಕರಣಗಳಿಲ್ಲ ಮತ್ತು 17 ಜಿಲ್ಲೆಗಳಲ್ಲಿ ಕಳೆದ 28 ದಿನಗಳಿಂದ ಪ್ರಕರಣಗಳು ವರದಿಯಾಗಿಲ್ಲ’ ಎಂದು ಮಾಹಿತಿ ನೀಡಿದ್ದಾರೆ.

ಸದ್ಯ ದೇಶದಾದ್ಯಂತ22,010 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 937 ಜನರು ಪ್ರಾಣ ಕಳೆದುಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT