ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಾಕ್‌ ಪ್ರಧಾನಿ ಮೇಲೆ ಒತ್ತಡ ತರಲು ಸಂಸದೆ ಬಾದಲ್‌ ಆಗ್ರಹ

ಗುರುನಾನಕ್‌ ಅರಮನೆಯ ಭಾಗಶಃ ಧ್ವಂಸ ಪ್ರಕರಣ
Last Updated 28 ಮೇ 2019, 16:48 IST
ಅಕ್ಷರ ಗಾತ್ರ

ಚಂಡಿಗಡ: ಪಾಕಿಸ್ತಾನದ ಪಂಜಾಬ್‌ ಪ್ರಾಂತ್ಯದಲ್ಲಿರುವ ಬಾಬಾ ಗುರುನಾನಕ್‌ ಅರಮನೆಯನ್ನು ಭಾಗಶಃ ಧ್ವಂಸಗೊಳಿಸಿರುವುದಕ್ಕೆ ಸಿಖ್‌ ಸಮುದಾಯಕ್ಕೆ ತೀವ್ರ ನೋವುಂಟಾಗಿದೆ. ಈ ಬಗ್ಗೆ ಸೂಕ್ತ ಕ್ರಮ ತೆಗೆದುಕೊಳ್ಳಲು ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌ ಅವರ ಮೇಲೆ ಒತ್ತಡ ತರಬೇಕು ಎಂದು ಶಿರೋಮಣಿ ಅಕಾಲಿ ದಳದ ಸಂಸದೆ ಹರ್‌ಸಿಮ್ರತ್‌ ಕೌರ್‌ ಬಾದಲ್‌ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

‘400 ವರ್ಷಗಳ ಹಿಂದಿನ ಈ ಅರಮನೆಯನ್ನು ಭಾಗಶಃ ಧ್ವಂಸಗೊಳಿಸಿದ್ದಲ್ಲದೇ, ಬೆಲೆಬಾಳುವ ಕಿಟಕಿಗಳು ಮತ್ತು ಬಾಗಿಲುಗಳನ್ನು ಮಾರಾಟ ಮಾಡಲಾಗಿದೆ. ಈ ಘಟನೆಯಿಂದ ತೀವ್ರ ನೋವಾಗಿದ್ದು, ಸಮುದಾಯದ ಜತೆಗೆ ಸೇರಿ ಇದನ್ನು ಖಂಡಿಸುತ್ತೇನೆ. ಈ ಬಗ್ಗೆ ಕ್ರಮಕ್ಕೆ ಇಮ್ರಾನ್‌ ಮೇಲೆ ಒತ್ತಡ ತರಬೇಕು’ ಎಂದು ಅವರು ಟ್ವೀಟ್‌ನಲ್ಲಿ ಮೋದಿ ಅವರನ್ನು ಒತ್ತಾಯಿಸಿದ್ದಾರೆ.

ಈ ಅರಮನೆಯನ್ನು ಧ್ವಂಸಗೊಳಿಸಿ, ಬೆಲೆಬಾಳುವ ವಸ್ತುಗಳನ್ನು ಮಾರಾಟ ಮಾಡಿರುವ ಕುರಿತು ಪಾಕಿಸ್ತಾನದ ಮಾಧ್ಯಮವೊಂದು ವರದಿ ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT