ಶುಕ್ರವಾರ, ಮೇ 29, 2020
27 °C
ರಾಜೀನಾಮೆ ತಿರಸ್ಕೃತ

ದೀಪಿಕಾ ತಲೆ ಕಡಿದವರಿಗೆ ₹10 ಕೋಟಿ ಕೊಡುವೆ ಎಂದಿದ್ದ ವ್ಯಕ್ತಿ ಮತ್ತೆ ಬಿಜೆಪಿಗೆ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಪದ್ಮಾವತ್ ಚಿತ್ರ ನಿರ್ದೇಶಕ ಸಂಜಯ್‌ ಲೀಲಾ ಬನ್ಸಾಲಿ ಮತ್ತು ನಟಿ ದೀಪಿಕಾ ಪಡುಕೋಣೆ ತಲೆ ಕಡಿದವರಿಗೆ ₹10 ಕೋಟಿ ಕೊಡುತ್ತೇನೆ ಎಂದಿದ್ದ ಹರಿಯಾಣದ ಬಿಜೆಪಿ ಮುಖಂಡ ಸೂರಜ್ ಪಾಲ್ ಅಮು ನೀಡಿದ್ದ ರಾಜೀನಾಮೆಯನ್ನು ಪಕ್ಷ ತಿರಸ್ಕರಿಸಿದೆ.

‘ಬಿಜೆಪಿಯ ಹರಿಯಾಣ ಘಟಕದ ವಿವಿಧ ಹುದ್ದೆಗಳಿಗೆ ಹಲವು ತಿಂಗಳುಗಳ ಹಿಂದೆ ರಾಜೀನಾಮೆ ನೀಡಿದ್ದೆ. ಬಿಜೆಪಿಯ ಹರಿಯಾಣ ಘಟಕದ ಮುಖ್ಯಸ್ಥ ಸುಭಾಷ್ ಬರಾಲಾ ಅವರು ಅದನ್ನು ಇಂದು ತಿರಸ್ಕರಿಸಿದ್ದಾರೆ. ವಿದ್ಯಾರ್ಥಿ ಘಟಕದಿಂದ ತೊಡಗಿ 29–30 ವರ್ಷಗಳಿಂದ ಪಕ್ಷದ ವಿವಿಧ ಹುದ್ದೆಗಳಲ್ಲಿದ್ದೆ. ಕಳೆದ 8 ತಿಂಗಳು ಪಕ್ಷದಿಂದ ದೂರವಿರುವುದು ಬಹಳ ಕಷ್ಟವಾಗಿತ್ತು. ಆದರೂ ವಿವಿಧ ಸಾಮಾಜಿಕ ಸಂಘಟನೆಗಳಲ್ಲಿ ಸಕ್ರಿಯನಾಗಿದ್ದೆ. ಇದೀಗ ಮರಳಿ ಮನೆ ಸೇರಿದಂತಾಗಿದೆ’ ಎಂದು ಸೂರಜ್ ಹೇಳಿದ್ದಾರೆ.

ಕರ್ಣಿ ಸೇನಾದ ಮುಖ್ಯಸ್ಥ ಆಗಿರುವ ಸೂರಜ್ ಪದ್ಮಾವತ್ ಚಿತ್ರದ ವಿರುದ್ಧದ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಹೇಳಿಕೆ ಕುರಿತು ಕಾರಣ ಕೇಳಿ ಬಿಜೆಪಿಯ ಮುಖ್ಯ ಮಾಧ್ಯಮ ಸಂಯೋಜಕರೂ ಆಗಿರುವ ಅವರಿಗೆ ನೋಟಿಸ್ ನೀಡಲಾಗಿತ್ತು. ನಂತರ ಹುದ್ದೆಗೆ ರಾಜೀನಾಮೆ ನೀಡಿದ್ದರು.

ಪದ್ಮಾವತ್‌ ಸಿನಿಮಾ ಬಿಡುಗಡೆಗೂ ಮುನ್ನ ಶಾಂತಿ ಕದಡಿದ ಆರೋಪದಲ್ಲಿ ಸೂರಜ್‌ ಅನ್ನು ಜನವರಿಯಲ್ಲಿ ಗುರುಗ್ರಾಮ ಪೊಲೀಸರು ಬಂಧಿಸಿದ್ದರು. ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ರಜಪೂತ ರಾಣಿ ಪದ್ಮಾವತಿಯನ್ನು ಅವಹೇಳನಕಾರಿಯಾಗಿ ಚಿತ್ರಿಸಲಾಗಿದೆ ಎಂದು ಆರೋಪಿಸಿ ಕರ್ಣಿಸೇನಾ ಸೇರಿ ಹಲವು ಸಂಘಟನೆಗಳು ಪದ್ಮಾವತ್ ಸಿನಿಮಾ ಬಿಡುಗಡೆಯನ್ನು ವಿರೋಧಿಸಿದ್ದವು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು