ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಾರ್ಗಿ ಪ್ರಕರಣ: ಸೋಮವಾರ ವಿಚಾರಣೆ

Last Updated 14 ಫೆಬ್ರುವರಿ 2020, 18:07 IST
ಅಕ್ಷರ ಗಾತ್ರ

ನವದೆಹಲಿ: ಗಾರ್ಗಿ ಮಹಿಳಾ ಕಾಲೇಜಿನಲ್ಲಿ ಕಳೆದ ವಾರ ವಿದ್ಯಾರ್ಥಿನಿಯರ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಸಲ್ಲಿಕೆಯಾಗಿದ್ದ ಅರ್ಜಿಯ ವಿಚಾರಣೆಯನ್ನು, ಸೋಮವಾರ ಕೈಗೆತ್ತಿಕೊಳ್ಳುವುದಾಗಿ ದೆಹಲಿ ಹೈಕೋರ್ಟ್‌ ಶುಕ್ರವಾರ ತಿಳಿಸಿದೆ.

‘ಅರ್ಜಿಯನ್ನು ತಕ್ಷಣವೇ ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು’ ಎಂದು ಅರ್ಜಿದಾರರಾದ ವಕೀಲ ಎಂ.ಎಲ್‌.ಶರ್ಮಾ, ನ್ಯಾಯಮೂರ್ತಿಗಳಾದ ಜಿ.ಎಸ್‌.ಸಿಸ್ತಾನಿ ಹಾಗೂ ಸಿ. ಹರಿಶಂಕರ್‌ ಅವರಿದ್ದ ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದರು. ‘ಫೆ.9ರಂದು ಎಫ್‌ಐಆರ್‌ ದಾಖಲಿಸಿಕೊಂಡಿರುವ ಪೊಲೀಸರು ಎರಡು ದಿನಗಳ ಹಿಂದಷ್ಟೇ 10 ಜನರನ್ನು ಬಂಧಿಸಿದ್ದಾರೆ. ಪ್ರಕರಣವನ್ನು ಶೀಘ್ರವೇ ಸಿಬಿಐಗೆ ಒಪ್ಪಿಸದೇ ಇದ್ದರೆ ಸಾಕ್ಷ್ಯ ನಾಶದ ಅಪಾಯವಿದೆ’ ಎಂದು ಶರ್ಮಾ ಪೀಠದ ಗಮನಕ್ಕೆ ತಂದರು.

‘ಕ್ಯಾಂಪಸ್‌ ಒಳಗಿರುವ ಎಲ್ಲ ಸಿಸಿಟಿವಿ ಕ್ಯಾಮೆರಾಗಳ ವಿಡಿಯೊ ರೆಕಾರ್ಡಿಂಗ್‌ಗಳನ್ನು ಸುರಕ್ಷಿತವಾಗಿಡಲು ಸೂಚಿಸಬೇಕು’ ಎಂದೂ ಶರ್ಮಾ ಹೈಕೋರ್ಟ್‌ಗೆ ಮನವಿ ಸಲ್ಲಿಸಿದರು. ಫೆ.17ರಂದು ವಿಚಾರಣೆ ಕೈಗೆತ್ತಿಕೊಳ್ಳುವುದಾಗಿ ಪೀಠವು ತಿಳಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT