ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅವಧಿ ಪೂರ್ವ ಬಿಡುಗಡೆ: ನಳಿನಿ ಶ್ರೀಹರನ್‌ ಸಲ್ಲಿಸಿದ್ದ ಅರ್ಜಿ ವಜಾ

Last Updated 29 ಆಗಸ್ಟ್ 2019, 18:29 IST
ಅಕ್ಷರ ಗಾತ್ರ

ಚೆನ್ನೈ: ರಾಜೀವ್‌ ಗಾಂಧಿ ಹತ್ಯೆ ಪ್ರಕರಣದ ಏಳು ಆರೋಪಿಗಳನ್ನು ಅವಧಿ ಪೂರ್ವ ಬಿಡುಗಡೆ ಮಾಡುವಂತೆ ಕೋರಿ ಆರೋಪಿನಳಿನಿ ಶ್ರೀಹರನ್‌ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ಗುರುವಾರ ವಜಾಗೊಳಿಸಿದೆ.

ಆರೋಪಿಗಳನ್ನು ಬಿಡುಗಡೆ ಮಾಡಬಹುದು ಎಂದು ತಮಿಳುನಾಡು ರಾಜ್ಯ ಸರ್ಕಾರ 2018ರ ಸೆಪ್ಟೆಂಬರ್‌ನಲ್ಲಿ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಅದರಂತೆ ಆರೋಪಿಗಳ ಬಿಡುಗಡೆಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದರು.

‘ಈಗಾಗಲೇ ಸಚಿವ ಸಂಪುಟ ಆರೋಪಿಗಳ ಅವಧಿ ಪೂರ್ವ ಬಿಡುಗಡೆಗೆ ಶಿಫಾರಸು ಮಾಡಿದೆ. ಹೀಗಿರುವಾಗ ಈ ಕುರಿತು ಮ್ಯಾಂಡಮಸ್‌ ಸಲ್ಲಿಸಿರುವುದು ಸರಿಯಲ್ಲ ಎಂದು ಹೇಳಿದ’ನ್ಯಾಯಮೂರ್ತಿ ಆರ್‌. ಸುಬ್ಬಯ್ಯ ಮತ್ತು ಸಿ. ಸರವಣನ್‌ ಅವರು ಅರ್ಜಿಯನ್ನು ವಜಾಗೊಳಿಸಿದರು.

1991ರ ಮೇ 21ರಂದು ಶ್ರೀಪೆರಂಬದೂರ್‌ನಲ್ಲಿ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರಧಾನಿ ರಾಜೀವ್‌ ಗಾಂಧಿ ಅವರನ್ನು ಎಲ್‌ಟಿಟಿಇ ಬಾಂಬ್‌ ಸ್ಫೋಟಿಸಿ ಕೊಂದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT