ಭಾನುವಾರ, ಜೂಲೈ 12, 2020
28 °C

ಸಿಖ್‌ ಗಲಭೆ | 12 ವಾರ ಜೀವಾವಧಿ ಶಿಕ್ಷೆ ಅಮಾನತಿನಲ್ಲಿಡಲು ದೆಹಲಿ ಹೈಕೋರ್ಟ್‌ ಆದೇಶ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: 1984ರ ಸಿಖ್‌ ವಿರೋಧಿ ಗಲಭೆಯ ಅ‍ಪರಾಧಿಯೊಬ್ಬರಿಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು 12 ವಾರಗಳ ಕಾಲ ಅಮಾನತಿನಲ್ಲಿಡಲು ದೆಹಲಿ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.

‘ಅಪರಾಧಿ ನರೇಶ್‌ ಶೇರಾವತ್‌, ದೀರ್ಘಕಾಲದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಜತೆಗೆ, ಕೊರೊನಾ ಸೋಂಕು ಸಹ ಬಹುಬೇಗ ತಗುಲಬಹುದು ಎನ್ನುವ ದೃಷ್ಟಿಯಿಂದ 12 ವಾರಗಳ ಕಾಲ ಶಿಕ್ಷೆಯನ್ನು ಅಮಾನತು ಮಾಡಲಾಗಿದೆ. ವೈಯಕ್ತಿಕ ಬಾಂಡ್‌ ಹಾಗೂ ₹20,000 ಶ್ಯೂರಿಟಿ ಬಾಂಡ್‌ ಅನ್ನು ನ್ಯಾಯಾಲಕ್ಕೆ ಸಲ್ಲಿಸಬೇಕು’ ಎಂದು ನ್ಯಾಯಮೂರ್ತಿ ಮನಮೋಹನ್‌ ಮತ್ತು ಸಂಜೀವ್‌ ನರುಲಾ ಅವರನ್ನು ಒಳಗೊಂಡ ಪೀಠ ಆದೇಶಿಸಿದೆ. ವಿಡಿಯೊ ಕಾನ್ಫರೆನ್ಸ್‌ ಮೂಲಕ ವಿಚಾರಣೆ ನಡೆಯಿತು.

ಶೇರಾವತ್‌ ಅವರ ಆರೋಗ್ಯ ತೀವ್ರ ಹದಗೆಟ್ಟ ಕಾರಣ, ಅವರನ್ನು ತಿಹಾರ್‌ನ ಕೇಂದ್ರ ಕಾರಾಗೃಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ತಿಂಗಳ ಕಾಲ ಶಿಕ್ಷೆಯನ್ನು ಅಮಾನತು ಮಾಡುವಂತೆ ಕೋರಿ ಶೇರಾವತ್‌ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು