ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಕ್ಷೇತ್ರಕ್ಕೆ ₹ 62,659 ಕೋಟಿ

ಆಯುಷ್ಮಾನ್‌ ಭಾರತ್ ಯೋಜನೆ, ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ಆದ್ಯತೆ
Last Updated 5 ಜುಲೈ 2019, 18:38 IST
ಅಕ್ಷರ ಗಾತ್ರ

ನವದೆಹಲಿ: ಆರೋಗ್ಯ ಕ್ಷೇತ್ರಕ್ಕೆ ಹಿಂದಿನ ಎರಡು ವರ್ಷಗಳಿಗಿಂತ ಹೆಚ್ಚಿನ ಆದ್ಯತೆ ದೊರೆತಿದ್ದು, 2019–20ನೇ ಹಣಕಾಸು ವರ್ಷದಲ್ಲಿ ₹ 62,659.12 ಕೋಟಿ ನಿಗದಿಪಡಿಸಲಾಗಿದೆ.

ಕೇಂದ್ರ ಸರ್ಕಾರದ ಮಹಾತ್ವಾಕಾಂಕ್ಷಿ ಯೋಜನೆಯಾಗಿರುವ ಆಯುಷ್ಮಾನ್‌ ಭಾರತ್ –ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಗೆಈ ಸಾಲಿನಲ್ಲಿ ಗರಿಷ್ಠ ಅಂದರೆ ₹ 6,400 ಕೋಟಿ ನಿಗದಿಪಡಿಸಲಾಗಿದೆ.

ಫಲಾನುಭವಿ ಕುಟುಂಬಗಳಿಗೆ ವಾರ್ಷಿಕ ₹ 5 ಲಕ್ಷದವರೆಗೂ ಆರೋಗ್ಯ ಭದ್ರತೆಯನ್ನು ಒದಗಿಸುವುದು ಈ ಯೋಜನೆಯ ಉದ್ದೇಶ. ಸುಮಾರು 50 ಕೋಟಿ ಜನರಿಗೆ ಯೋಜನೆಯಿಂದ ಲಾಭವಾಗಲಿದೆ ಎಂಬುದು ಕೇಂದ್ರ ಸರ್ಕಾರದ ಅಂದಾಜು.

ರಾಷ್ಟ್ರೀಯ ನಗರ ಆರೋಗ್ಯ ಮಿಷನ್‌ ಅನ್ವಯ ಆಯುಷ್ಮಾನ್‌ ಭಾರತ್‌ ಆರೋಗ್ಯ ಕೇಂದ್ರಗಳ ಸ್ಥಾಪನೆಗೆ ₹ 249.96 ಕೋಟಿ ಕಾದಿರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT