ಮಂಗಳವಾರ, ಜೂನ್ 2, 2020
27 °C
ಕಳೆದ 24 ಗಂಟೆಗಳಲ್ಲಿ 92 ಹೊಸ ಪ್ರಕರಣ, 4 ಸಾವು

ಸಮುದಾಯಕ್ಕೆ ಹರಡಿಲ್ಲ ಕೊರೊನಾ ವೈರಸ್ ಸೋಂಕು: ಕೇಂದ್ರ ಸರ್ಕಾರ ಸ್ಪಷ್ಟನೆ

ಪಿಟಿಐ Updated:

ಅಕ್ಷರ ಗಾತ್ರ : | |

Coronavirus

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಹೊಸದಾಗಿ 92 ಕೊರೊನಾ ವೈರಸ್ ಸೋಂಕು (ಕೋವಿಡ್–19) ಪ್ರಕರಣಗಳು ದೃಢಪಟ್ಟಿದ್ದು, ನಾಲ್ವರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಜತೆಗೆ, ಸೋಂಕು ಸಮುದಾಯಕ್ಕೆ ಹರಡಿಲ್ಲ ಎಂದು ಸ್ಪಷ್ಟನೆ ನೀಡಿದೆ.

ದೇಶದಲ್ಲಿ ಕೊರೊನಾ ಈಗಲೂ ಸ್ಥಳೀಯ ಹರಡುವಿಕೆ ಹಂತದಲ್ಲಿ ಇದೆಯಷ್ಟೆ ಎಂದು ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲುವ್ ಅಗರ್‌ವಾಲ್ ತಿಳಿಸಿದ್ದಾರೆ.

ಸದ್ಯ ದೇಶದಲ್ಲಿ ಕೊರೊನಾ ಪೀಡಿತರ ಸಂಖ್ಯೆ 1,071 ತಲುಪಿದ್ದು, ಮೃತಪಟ್ಟವರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ.

ಕೊರೊನಾ ಹರಡುವಿಕೆ ತಡೆಯುವ ನಿಟ್ಟಿನಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತೀ ಅಗತ್ಯ. ಕೇವಲ ಒಬ್ಬ ವ್ಯಕ್ತಿಯ ನಿರ್ಲಕ್ಷ್ಯವೂ ಸೋಂಕು ಹರಡಲು ಕಾರಣವಾಗಬಹುದು. ಈ ಕುರಿತು ಇನ್ನಷ್ಟು ಜಾಗೃತಿ ಮೂಡಿಸುವ ಕೆಲಸವಾಗಬೇಕಿದೆ ಎಂದು ಅವರು ತಿಳಿಸಿದ್ದಾರೆ.

ಈವರೆಗೆ ದೇಶದಲ್ಲಿ 38,442 ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ. ಈ ಪೈಕಿ 3,501 ಜನರ ಮಾದರಿಗಳನ್ನು ಭಾನುವಾರ ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿಯ (ಐಸಿಎಂಆರ್‌) ಆರ್‌. ಗಂಗಾಖೇಡ್ಕರ್ ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ಖಾಸಗಿ ಪ್ರಯೋಗಾಲಯಗಳಲ್ಲಿ 1,334 ಮಾದರಿಗಳ ಪರೀಕ್ಷೆ ನಡೆಸಲಾಗಿದೆ ಎಂದೂ ಅವರು ಹೇಳಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು