ಅಯೋಧ್ಯೆ ಭೂವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

7
ವಿಸ್ತೃತ ವಿಚಾರಣೆಗೆ ತ್ರಿಸದಸ್ಯ ಪೀಠ ನೇಮಕ ಸಾಧ್ಯತೆ

ಅಯೋಧ್ಯೆ ಭೂವಿವಾದ: ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆ

Published:
Updated:

ನವದೆಹಲಿ: ಅಯೋಧ್ಯೆಯ ವಿವಾದಿತ ಭೂಪ್ರದೇಶವನ್ನು ಹಂಚಿಕೆ ಮಾಡಿದ್ದರ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಇಂದು ವಿಚಾರಣೆಗೆ ಬರಲಿವೆ. ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಮತ್ತು ನ್ಯಾಯಮೂರ್ತಿ ಎಸ್‌.ಕೆ. ಕೌಲ್ ಅವರಿರುವ ಪೀಠ ವಿಚಾರಣೆ ನಡೆಸಲಿದೆ.

ಇಂದಿನ ವಿಚಾರಣೆ ವೇಳೆ, ಅಯೋಧ್ಯೆ ಪ್ರಕರಣದ ವಿಸ್ತೃತ ವಿಚಾರಣೆಗೆ ಮೂವರು ನ್ಯಾಯಮೂರ್ತಿಗಳನ್ನೊಳಗೊಂಡ ನ್ಯಾಯಪೀಠ ನೇಮಕ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಮಂದಿರಕ್ಕೆ ತಕ್ಷಣ ಸುಗ್ರೀವಾಜ್ಞೆ ಇಲ್ಲ: ಮೋದಿ​

ವಿವಾದಿತ ಭೂಪ್ರದೇಶವನ್ನು ನಿರ್ಮೋಹಿ ಅಖಾಡ, ರಾಮ ಲಲ್ಲಾ ಮತ್ತು ಸುನ್ನಿ ವಕ್ಫ್‌ ಮಂಡಳಿಗೆ ಹಂಚಿಕೆ ಮಾಡಿ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ತೀರ್ಪು ನೀಡಿತ್ತು. ಇದನ್ನು ಪ್ರಶ್ನಿಸಿ ಹಿಂದೂ ಮತ್ತು ಮುಸ್ಲಿಂ ಧಾರ್ಮಿಕ ಸಂಘಟನೆಗಳು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದವು. 2018ರ ಅಕ್ಟೋಬರ್ 29ರಂದು ಇವುಗಳ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್ ಮುಂದಿನ ವಿಚಾರಣೆಯನ್ನು 2019ರ ಜನವರಿ 4ರಂದು ನಡೆಸುವುದಾಗಿ ಹೇಳಿತ್ತು.

ಇದನ್ನೂ ಓದಿ: ಅಯೋಧ್ಯೆ ತೀರ್ಪು, ಇಸ್ಲಾಂಗೆ ಮಸೀದಿ ಹಂಗಿಲ್ಲ: 1994ರ ತೀರ್ಪು ಎತ್ತಿಹಿಡಿದ ‘ಸುಪ್ರೀಂ’

‘ಅಯೋಧ್ಯೆಯ ರಾಮ ಜನ್ಮಭೂಮಿ–ಬಾಬರಿ ಮಸೀದಿ ವಿವಾದವನ್ನು ‘ಭೂ ವಿವಾದ’ ಎಂದು ಮಾತ್ರ ಪರಿಗಣಿಸಲಾಗುವುದು. ಅಂತಿಮ ವಿಚಾರಣೆ ಆರಂಭವಾದ ನಂತರ ಒಂದೇ ಹಂತದಲ್ಲಿ ಪೊರ್ಣಗೊಳಿಸಲಾಗುವುದು’ ಎಂದೂ ಸುಪ್ರೀಂ ಕೋರ್ಟ್‌ ಹೇಳಿತ್ತು.

ಇದನ್ನೂ ಓದಿ: ಅಯೋಧ್ಯೆ ಪ್ರಕರಣ ಭೂ ವಿವಾದ ಮಾತ್ರ

ಈ ಮಧ್ಯೆ, ಸುಪ್ರೀಂ ತೀರ್ಪು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ವಿಎಚ್‌ಪಿ ಸೇರಿದಂತೆ ವಿವಿಧ ಹಿಂದೂ ಸಂಘಟನೆಗಳು ಆಗ್ರಹಿಸಿವೆ. ಆದರೆ, ನ್ಯಾಯಾಂಗ ಪ್ರಕ್ರಿಯೆ ಪೂರ್ಣಗೊಂಡ ಬಳಿಕವಷ್ಟೇ ಈ ನಿಟ್ಟಿನಲ್ಲಿ ಯೋಚಿಸಬಹುದಷ್ಟೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಇನ್ನಷ್ಟು...

* ಅಯೋಧ್ಯೆ: ಕಾನೂನು ರೂಪಿಸಲು ವಿಎಚ್‌ಪಿ ಆಗ್ರಹ

ರಾಮ ಮಂದಿರ ನಿರ್ಮಾಣಕ್ಕೆ ಆತುರ ಸಲ್ಲದು: ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌​

ರಾಮ ಮಂದಿರ ನಿರ್ಮಿಸದಿದ್ದರೆ ಹಿಂದೂ ಧರ್ಮಕ್ಕೆ ಹಿನ್ನಡೆ: ವಿಶ್ವೇಶತೀರ್ಥ ಸ್ವಾಮೀಜಿ​

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !