ಸೋಮವಾರ, ಜೂಲೈ 6, 2020
23 °C

ನವದೆಹಲಿಯ ತುಘಲಕ್‌ಬಾದ್ ಕೊಳೆಗೇರಿಯಲ್ಲಿ ಭಾರೀ ಅಗ್ನಿ ಅನಾಹುತ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ರಾಷ್ಟ್ರ ರಾಜಧಾನಿಯ ತುಘಲಕ್‌ಬಾದ್ ಕೊಳೆಗೇರಿಯಲ್ಲಿ ಮಂಗಳವಾರ ಬೆಳಿಗ್ಗೆ 1 ಗಂಟೆ ಸುಮಾರಿಗೆ ಭಾರೀ ಪ್ರಮಾಣದ  ಬೆಂಕಿ ಕಾಣಿಸಿಕೊಂಡಿದೆ.

ಸುಮಾರು 30 ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ದೆಹಲಿಯ ದಕ್ಷಿಣ ವಲಯದ ಉಪ ಮುಖ್ಯ ಅಗ್ನಿಶಾಮಕ ಅಧಿಕಾರಿ ಎಸ್.ಎಸ್. ತುಲಿ ತಿಳಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಅವರು, 'ಸುಮಾರು 30 ಅಗ್ನಿಶಾಮಕ ಸಿಬ್ಬಂದಿ ಬೆಂಕಿಯನ್ನು ನಿಯಂತ್ರಣಕ್ಕೆ ತರುವಲ್ಲಿ ಯಶಸ್ವಿಯಾಗಿದ್ದಾರೆ. ಅಗ್ನಿ ಅವಘಡಕ್ಕೆ ಕಾರಣಗಳು ತಿಳಿದುಬಂದಿಲ್ಲ. ಬೆಂಕಿಯಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ' ಎಂದು ಹೇಳಿದ್ದಾರೆ.  

ಅವಘಡದಲ್ಲಿ ಹಾನಿಗೊಳಗಾದ ಆಸ್ತಿಯ ಮೌಲ್ಯವನ್ನು ಇನ್ನೂ ಅಂದಾಜಿಸಲಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು